22.6 C
Bengaluru
Saturday, July 27, 2024

ಜಿ.ಪಂ.-ತಾಪಂ ಚುನಾವಣೆ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು

#High Court #final deadline #Zilla Panchayat #Taluk Panchayat # Election Govt

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ(Redistribution of constituencies) ಹಾಗೂ ಮೀಸಲಾತಿ ನಿಗದಿ(Make a reservation) ಪ್ರಕ್ರಿಯೆಗೆ ಹೈಕೋರ್ಟ್(Highcourt) ನಾಲ್ಕು ವಾರ ಅಂತಿಮ ಕಾಲಾವಕಾಶ ನೀಡಿದೆ ಎಂದು ಗುರುವಾರ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ.ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ (Electioncommisssion) ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್‌ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್‌ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿತು. ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡುತ್ತಿರುವುದಾಗಿ ಪೀಠ ತಿಳಿಸಿತು.

Related News

spot_img

Revenue Alerts

spot_img

News

spot_img