Revenue Facts

” ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್:

” ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್:

ಬೆಂಗಳೂರು: ಮೇ-16:
ಇಂದ್ರಿಷ್ ಪಾಷ (45) ಎಂಬುವವನ ಅನುಮಾನಸ್ಪದ ಸಾವಿನ ಪ್ರಕರಣದಲ್ಲಿ ಜೈಲು ಸೇರಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ @ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೊರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಸೋಷಿಯಲ್ ಮಿಡಿಯಾದಲ್ಲಿ ಹಿಂದೂ ಪರ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಸೇರಿ ಕಳೇದ ಮಾರ್ಚ್ 31 ರಂದು ಮಂಡ್ಯ ಕಡೆಯಿಂದ ಜಾನೂವಾರು ಸಾಗಣೆ ಮಾಡಿಕೊಂಡು ಬರುತ್ತಿದ್ದ ಇಂದ್ರಿಷ್ ಪಾಷ (45) ರವರನ್ನು ತಡೆದು, ಹಲ್ಲೇ ನಡೆಸಿ ಕೊಲೆಮಾಡಿದ್ದಾರೆ ಎಂದು ಸೋಷಿಯಲ್ ಮಿಡಿಯದಲ್ಲಿ ವಿಡಿಯೋಗಳು ಹರಿದಾಡಿ ಬಾರಿ ಸುದ್ದಿಯಾಗಿದ್ದು, ನಂತರ ತಲೆಮಾರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ಪೊಲೀಸರು ಏಪ್ರಿಲ್ 05 ರಂದು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದರು.

ಈ ಸಂಬಂಧ ಜಾಮೀನು ಕೋರಿ ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ಹೈಕೋರ್ಟ್ ನ ರಜಾಕಾಲದ ಪೀಠದಲ್ಲಿ ನ್ಯಾಯಾಮೂರ್ತಿ ಎಂ.ಜಿ ಉಮಾ ಅವರು ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕುಮಾರ್@ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್. ಪವನ್ ಕುಮಾರ್, ಪಿ.ಲಿಂಗಪ್ಪ ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದ ವಿಚಾರಣೆ ವೇಳೆಯಲ್ಲಿ ಆರೋಪಿಗಳ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ರವರು ಮರಣೋತ್ತರ ಪರೀಕ್ಷೆಯಲ್ಲಿ ಇಂದ್ರಿಷ್ ಪಾಷ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ, ಗಂಬೀರ ಗಾಯಗಳ ಬಗ್ಗೆ ಯಾವ ಮಾಹಿತಿಯು ಇಲ್ಲ, ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು FIR ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು. ಈ ವಾದವನ್ನು ನ್ಯಾಯಾಲಯವು ಪರಿಗಣಿಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

Exit mobile version