ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಪಶ್ಚಿಮ ವಿಭಾಗದ ಕಾಟನ್ ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಇನ್ಸ್ ಪೆಕ್ಟರ್ ಕೆ.ವೈ ಪ್ರವೀಣ್ ರವರು ಎಸಿಎಂಎಂ ನ್ಯಾಯಾಲದಿಂದ ಬಂದ ಪಿಸಿಆರ್ (ಸಿವಿಲ್ ದಾವೆ)ಅನ್ನು ಕಡೆಗಣಿಸಿ FIR ದಾಖಲು ಮಾಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಪಿಐ ಕೆ.ವೈ.ಪ್ರವೀಣ್ ರವರ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
2022ರ ಮೇ 4ರಂದೇ ಕಳ್ಳತನ ಪ್ರಕರಣ ಕುರಿತಾಗಿ FIR ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜೆಸ್ಟ್ರೇಟ್ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್ಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಕೆ.ವೈ. ಪ್ರವೀಣ್ (Inspector K Y Praveen) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೋರ್ಟ್ ಆದೇಶದಂತೆ FIR ದಾಖಲಿಸುವುದು ಠಾಣಾಧಿಕಾರಿ ಕರ್ತವ್ಯ. ಆದರೆ ಹಾಗೆ ಮಾಡದೆ ಕರ್ತವ್ಯ ದಲ್ಲಿನ ಬೇಜಾವಾಬ್ದಾರಿತನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾ|| ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.