ಬೆಂಗಳೂರು: 2019, ಏಪ್ರಿಲ್ 1ರ ನಂತ್ರ ಖರೀದಿಸಿದಂತ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( HSRP Number Plate ) ಅಳವಡಿಸೋದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ನವೆಂಬರ್.17 ಡೆಡ್ ಲೈನ್ ನೀಡಲಾಗಿತ್ತು. ಈಗ ಈ ಅವಧಿಯನ್ನು ಫೆ.17, 2024ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಲಾಗಿದೆ.ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ನ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಇಲ್ಲದಿದ್ದರೆ ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ 500 ರೂಪಾಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ಕಟ್ಟಬೇಕಿತ್ತು. ಸರ್ಕಾರ ಈಗ ಗಡುವನ್ನು ವಿಸ್ತರಣೆ ಮಾಡಿದ್ದು, ಫೆಬ್ರವರಿ 17ರವರೆಗೂ ಕಾಲಾವಕಾಶ ನೀಡಿದೆ.HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು.ಎಚ್‌ಎಸ್‌ಆರ್‌ಪಿ(HSRP) ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್ ಪ್ಲೇಟ್‌ಗಳನ್ನು ಎರಡು ಲಾಕ್ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.