29.2 C
Bengaluru
Sunday, February 25, 2024

ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಯಾಗಿ IAS ಅಧಿಕಾರಿ ಎಲ್. ಕೆ. ಅತೀಖ್ ನೇಮಕ

#IAS officer #Deputy chief secretary #chiefminister #L,k,Atheeq

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್(IAS) ಅಧಿಕಾರಿಯಾಗಿರುವ ಎಲ್.ಕೆ.ಅತೀಖ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಅತೀಖ್ ಇದೀಗ ಡಾ. ರಜನೀಶ್ ಗೋಯಲ್ ಅವರನ್ನು ಬಿಡುಗಡೆ ಮಾಡಿದ್ದ ಆ ಸ್ಥಾನವನ್ನು ಇವರು ತುಂಬಲಿದ್ದಾರೆ. ಡಾ.ರಜನೀಶ್ ಗೋಯಲ್ ಅವರು ರಾಜ್ಯದ ಹೊಸ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಅಲ್ಲದೆ, ಅತೀಖ್ ಅವರು ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಯನ್ನು ನಿಭಾಯಿಸಲಿದ್ದಾರೆ.ಸಿದ್ದರಾಮಯ್ಯ ಅವರ ಈ ಹಿಂದಿನ‌ ಸಿಎಂ ಅವಧಿಯಲ್ಲಿ ಅತೀಕ್ ಮುಖ್ಯಮಂತ್ರಿ‌ ಪ್ರಧಾನ‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ಬಳಿಕ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿದ್ದರು.ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.ಶ್ರೀ. Atheeq L K IAS, ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರದ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಇರಿಸಲಾಗಿದೆ.

ACStoCM (1)

Related News

spot_img

Revenue Alerts

spot_img

News

spot_img