28.2 C
Bengaluru
Wednesday, July 3, 2024

ಅಕ್ರಮ ಕಟ್ಟಡ ನಿರ್ಮಾಣ: ಉಲ್ಲಂಘಿಸಿದರೆ ಕಾನೂನು ಕ್ರಮ

ಬೆಂಗಳೂರು: ಅಕ್ರಮ ಬಡಾವಣೆಗಳ(Illegal settlement) ಕಟ್ಟಡಗಳಿಗೆ ಮೊದಲ ವರ್ಷ ದುಪ್ಪಟ್ಟು ತೆರಿಗೆ(Double taxation) ವಿಧಿಸುವ ಪ್ರಸ್ತಾಪವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವ‌ರ್ ಬಿ.ಖಂಡ್ರೆ ಮುಂದಿಟ್ಟಿದ್ದಾರೆ.ವಿಧಾನ ಸೌಧ’ದ ಸಮಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ(Karnataka Municipal Corporations Act) 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ರಚಿಸಲಾಗಿರುವ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಈ ಪ್ರಸ್ತಾಪ ಮಾಡಿದ್ದಾರೆ.ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಬೇಕು.ನಂತರದ ವರ್ಷಗಳಲ್ಲಿ ನಿಯ ಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.ಭವಿಷ್ಯದಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ಮೈ 1976 ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು 1964ರಲ್ಲಿ ಅಗತ್ಯ ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ(Kaveri software) ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು. ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ವಾಯು, ಜಲ ಸಹಿತ ಪರಿಸರ ಸಂರಕ್ಷಣೆ ಕಾಯ್ದೆ ಉಲ್ಲಂ ಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img