26.9 C
Bengaluru
Friday, July 5, 2024

ಎಫ್‌ಡಿಎ, ಎಸ್‌ಡಿಎ ಪರೀಕ್ಷೆಯಲ್ಲಿ ಅಕ್ರಮ,ನಕಲಿ ಅಭ್ಯರ್ಥಿ ಪೊಲೀಸ್ ವಶಕ್ಕೆ

ಕಲಬುರಗಿ;ರಾಜ್ಯದಲ್ಲಿ ಪಿಎಸ್‌ಐ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬಯಲಾಗಿದೆ. ಎಫ್‌ಡಿಎ(FDA) ಮತ್ತು ಎಸ್‌ಡಿಎ(SDA) ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಬ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದವರನ್ನು ಬಂಧಿಸಲಾಗಿದೆ. ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದನು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಈ ಸಂಬಂಧ ಈತನಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಯಾದಗಿರಿಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದ್ದರೆ, ಕಲಬುರ್ಗಿಯ ಶ್ರೀ ಶರಣಬಸವೇಶ್ವರ ವಿವಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಸೊನ್ನ ಗ್ರಾಮದ ತ್ರಿಮೂರ್ತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ(KPSC) ಪರೀಕ್ಷೆ ಬರೆಯುತ್ತಿದ್ದಾರೆ.

Related News

spot_img

Revenue Alerts

spot_img

News

spot_img