24.4 C
Bengaluru
Sunday, September 8, 2024

3 ವರ್ಷದೊಳಗೆ ಎತ್ತಿನ ಹೊಳೆ ಯೋಜನೆ ಜಾರಿ;ಮುಖ್ಯಮಂತ್ರಿ ಸಿದ್ದರಾಮಯ್ಯ

#Implementation # Ethin Hola Project # 3 years #Chief Minister Siddaramaiah

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ(Drinking water well) ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು(Ettinhola Project) ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೀರೇಶ್ವರಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಯುವ ಶ್ರೀಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.ನೆಲಮಂಗಲ(Nelamangala) ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಿದೆ. ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ.ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.ನಾನು ಸಿಎಂ ಆಗಿದ್ದ ವೇಳೆ ಈ ಯೋಜನೆಯನ್ನು ಪ್ರಾರಂಭಿಸಿದ್ದೆ. ಆದರೆ, ಮಧ್ಯೆ 5 ವರ್ಷ ಅನುದಾನವಿಲ್ಲದೇ ಕೆಲಸಗಳಾಗಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅನುದಾನ ಒದಗಿಸಲಾಗುವುದು. ಈ ಯೋಜನೆ ಪೂರ್ಣಗೊಳಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಪ್ರದೇಶಗಳ ಕುಡಿಯುವ ನೀರಿನ ಬವಣೆ ನೀಗಿಸಲಾಗುವುದು ಎಂದು ಹೇಳಿದರು.ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ.ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ’ ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img