21.4 C
Bengaluru
Saturday, July 27, 2024

ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ;ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಮಿತಿಗಳ ರಚನೆ

#Important announcement # CM Siddaramaiah #formation # committees # guarantee scheme# implementation

ಬೆಂಗಳೂರು;ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲ ಐದು ಭರವಸೆಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಲಿದೆ. ಈ ಸಂಬಂಧ ಕೆಪಿಸಿಸಿ(KPCC) ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ‘ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು. ಸಮಿತಿಯ ಉಳಿದ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಗೌರವ ಧನ ನೀಡಲಾಗುವುದು. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ್ನ ನೀಡಲಾಗುವುದು’ ಎಂದು ಹೇಳಿದ್ದಾರೆ.ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು.

Related News

spot_img

Revenue Alerts

spot_img

News

spot_img