22 C
Bengaluru
Monday, December 23, 2024

ಬಿವೈ ವಿಜಯೇಂದ್ರ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು;ರಾಜ್ಯ ಬಿಜೆಪಿ(BJP) ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಬಿ.ವೈ.ವಿಜಯೇಂದ್ರ ಅವರು ಇಂದು ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ(Officers meeting) ನಡೆಸಲಿದ್ದಾರೆ. ಸಭೆಯು ಮಲ್ಲೇಶ್ವರಂ(malleshwaram) ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನದ ಬಳಿಕ ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸಿ, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ನಾಳೆ ರಾಜ್ಯದ ಪ್ರಮುಖ ನಾಯಕರ ಸಭೆ ಕರೆದಿದ್ದು, ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಮೇರೆಗೆ ಹೈಕಮಾಂಡ್ ಹಲವರು ವಿರೋಧದ ನಡುವೆಯೂ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದು, ಅದನ್ನು ಉಳಿಸಿಕೊಳ್ಳಲು ವಿಜಯೇಂದ್ರ ಕಸರತ್ತು ನಡೆಸಿದ್ದಾರೆ. ಹೀಗಾಗಿ ಉಪಾಧ್ಯಕ್ಷ, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಮೋರ್ಚಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಿದ್ದರು.

Related News

spot_img

Revenue Alerts

spot_img

News

spot_img