Revenue Facts

ಇಂದು ಕಾವೇರಿ ನೀರು ಹಂಚಿಕೆ ಸಂಬಂಧ ಮಹತ್ವದ ವಿಚಾರಣೆ

ಇಂದು ಕಾವೇರಿ ನೀರು ಹಂಚಿಕೆ ಸಂಬಂಧ ಮಹತ್ವದ ವಿಚಾರಣೆ

ದೆಹಲಿ : ಇಂದು ಕರ್ನಾಟಕದ ಪಾಲಿಗೆ ಮಹತ್ವದ ದಿನವಾಗಿದೆ. ಸಮರ್ಪಕ ಪ್ರಮಾಣದ ಕಾವೇರಿ ನೀರು ಹರಿಸಲು ನಿರ್ದೇಶನ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಇಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.ಕಾವೇರಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. CWMA ಆದೇಶ ತಡೆಕೋರಿ ಅರ್ಜಿ ಸಲ್ಲಿಸಿದೆ. ಇಂದು ಬೆಳಗ್ಗೆ 10.30ಕ್ಕೆ ನ್ಯಾ.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ.ಕೇಂದ್ರ ಸಚಿವರನ್ನ ಭೇಟಿ ಮಾಡಲಿರುವ CM, DCM ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ.  ಬೆಳಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ​ ಶೇಖಾ​ವತ್​ ಭೇಟಿ ಮಾಡಲಿದ್ಧಾರೆ. ಕೇಂದ್ರ ಸಚಿವರು, ಪ್ರಮುಖ ಸಂಸದರು ಭಾಗಿ ಸಾಧ್ಯತೆಗಳಿವೆ. ಇಂದೇ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಅರ್ಜಿಯನ್ನೂ ಸಹ ವಿಚಾರಣೆ ನಡೆಯಲಿದೆ,ಇಂದು ಸುಪ್ರೀಂಕೋರ್ಟ್​ನಲ್ಲಿ ಕಾವೇರಿದ ವಿಚಾರಣೆ ನಡೆಯಲಿದ್ದು ಕರ್ನಾಟಕದ ಚಿತ್ತ ಸುಪ್ರೀಂನತ್ತಇದೆ

Exit mobile version