28.2 C
Bengaluru
Wednesday, July 3, 2024

ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ

ಬೆಂಗಳೂರು;ರಾಜ್ಯಸಭೆಗೆ ಸುಧಾ ಮೂರ್ತಿ ಇನ್ಫೋಸಿಸ್(Infosis) ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ(Sudhamoorthy) ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ(nomination) ಮಾಡಲಾಗಿದೆ. ಬಿಜೆಪಿಯಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತು ಮೋದಿ ಅವರು ಸುಧಾ ಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ‘ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ತಂದಿದೆ. ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ’ ಎಂದು ತಿಳಿಸಿದ್ದಾರೆ.ರಾಜ್ಯಸಭೆಗೆ ನಾಮನಿರ್ದೇಶನವಾಗಿರುವ ಇನ್ಫೋಸಿಸ್ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ನಾನು ವಿದೇಶದಲ್ಲಿದ್ದು, 1 ನಿಮಿಷದ ಹಿಂದೆ ನಾಮನಿರ್ದೇಶನಗೊಂಡ ವಿಷಯ ತಿಳಿಯಿತು ಎಂದು ತಿಳಿಸಿದ್ದಾರೆ. ನನ್ನ ಕೈಯಲ್ಲಿ ಆಗುವಷ್ಟು ಕೆಲಸ ಮಾಡುತ್ತೇನೆ ಎಂದು ಸುಧಾ ಮೂರ್ತಿ ಹೇಳಿದ್ದಾರೆ.ಸುಧಾ ಮೂರ್ತಿ ಅವರು ಸಾಕಷ್ಟು ಸಾಮಾಜಿಕ ಸೇವೆ ಮಾಡಿದ್ದಾರೆ. 1996 ರಲ್ಲಿ ಸಾರ್ವಜನಿಕ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರಿಗೆ ವಾಸಿಸಲು 2,300 ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿ ಶಾಲೆಯು ಗ್ರಂಥಾಲಯ ಹೊಂದಿರಬೇಕೆಂಬ ದೃಷ್ಟಿಯಿಂದ ಇದುವರೆಗೆ 70,000 ಗ್ರಂಥಾಲಯಗಳನ್ನು ಸ್ಥಾಪಿಸಿದ್ದಾರೆ. ಅಲ್ಲದೇ ಅವರ ಟ್ರಸ್ಟ್ ಇದುವರೆಗೆ 16,000 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿದೆ.2006 ರಲ್ಲಿ, ಸುಧಾ ಮೂರ್ತಿ ಅವರಿಗೆ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಿ ಗೌರವಿಸಲಾಯಿತು. ನಂತರ 2023 ರಲ್ಲಿ, ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಲಾಯಿತು.

Related News

spot_img

Revenue Alerts

spot_img

News

spot_img