ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯಗಳನ್ನು ಸಾಗಾಣಿಕೆ ಮಾಡುವ ಲಾರಿಗಳಿಗೆ ಜಿಪಿಎಸ್(GPS) ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ(Ration Distribution Association), ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಭಾರತ ಆಹಾರ ನಿಗಮ (IFCI) ಗೋದಾಮುಗಳಿಂದ ಇಲಾಖೆಯ ಸಗಟು ಮಳಿಗೆಗಳಿಗೆ(For wholesale outlets) ಹಾಗೂ ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ(fair price shops) ಪಡಿತರ ಸಾಗಿಸುವ ಲಾರಿಗಳಲ್ಲಿ ಅಕ್ಕಿ ಕದಿಯುವ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ.ಭಾರತ ಆಹಾರ ನಿಗಮ ಗೋದಾಮುಗಳಿಂದ ಆಹಾರ ಇಲಾಖೆಯ ಸಗಟು ಮಳಿಗೆಗಳಿಗೆ ಮತ್ತು ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಸಾಗಿಸುವ ಲಾರಿಗಳಲ್ಲಿ ಅಕ್ಕಿ ಕದಿಯುವ ಪ್ರಕರಣ ನಿರಂತರವಾಗಿ ನಡೆಯುತ್ತಿದ್ದು, ಅನೇಕ ಸಲ ಪಡಿತರ ಚೀಲದಲ್ಲಿ ಅಕ್ಕಿ ಕಡಿಮೆಯಾಗಿರುತ್ತದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡುವ ಸಂದರ್ಭದಲ್ಲಿ ಆಹಾರ ಧಾನ್ಯ ಕೊರತೆ ಎದುರಾಗಿದೆ. ಹೀಗಾಗಿ, ಪಡಿತರ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಆಹಾರ ಇಲಾಖೆಯ ಸಗಟು ಮಳಿಗೆಗಳಿಗೆ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಾಪನ ಯಂತ್ರ ಮತ್ತು ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.