21.6 C
Bengaluru
Sunday, September 8, 2024

ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ;ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

#Interest Waiver # Farmers’ Loans # Cooperative Banks# Official Order # State Govt

ಬೆಂಗಳೂರು; ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದರಿಂದ ಸುಮಾರು 440.30 ಕೋಟಿ ರೂಪಾಯಿಗಳ ಬಡ್ಡಿ ಮನ್ನಾ ಆಗಲಿದೆ. ಫೆಬ್ರವರಿ 20ರ ಒಳಗೆ ಸಂಘ, ಬ್ಯಾಂಕ್‌ಗಳಿಗೆ ಸಂಪೂರ್ಣ ಸಾಲ ಬಾಕಿಯನ್ನು ಮರುಪಾವತಿಸಿದರೆ ಇದರ ಲಾಭ ಸಿಗಲಿದೆ ಎಂದು ಹೇಳಲಾಗಿದೆ. ಆದರೆ ಇದು ಬೆಳೆ ಸಾಲಕ್ಕೆ ಅನ್ವಯವಾಗುವುದಿಲ್ಲ.ಇದರಲ್ಲಿ ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ ಪಡೆದು ಸುಸ್ತಿಯಾಗಿರುವ ಸಾಲಗಳ ಡಿ.31ರವರೆಗಿನ ಕಂತುಗಳನ್ನು ಫೆ.20ರ ಒಳಗಾಗಿ ಪಾವತಿಸಿದರೆ ಅಂತಹವರ ಬಡ್ಡಿಯನ್ನು (ಮರುಪಾವತಿ ದಿನಾಂಕದವರೆಗೆ) ಸಂಪೂರ್ಣ ಮನ್ನಾ ಮಾಡಲಾಗುವುದು.ಬೆಳೆ ಸಾಲವು ಅಲ್ಪಾವಧಿ ಸಾಲವಾಗಿದ್ದು, ಶೂನ್ಯ ಬಡ್ಡಿದರದಲ್ಲಿ ಬ್ಯಾಂಕ್ ಗಳು ನೀಡುತ್ತವೆ. ಹೀಗಾಗಿ ಅದಕ್ಕೆ ಬಡ್ಡಿ ಮನ್ನಾ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.ಮಧ್ಯಮಾವಧಿ ಸಾಲವನ್ನು 12 ತಿಂಗಳಿಂದ 36 ತಿಂಗಳಿಗೆ ಹಾಗೂ ದೀರ್ಘಾವಧಿ ಸಾಲವನ್ನು 10 ವರ್ಷದ ಅವಧಿವರೆಗೆ ನೀಡಲಾಗುತ್ತದೆ.

Related News

spot_img

Revenue Alerts

spot_img

News

spot_img