Revenue Facts

ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು:ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ವಿರುದ್ಧ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ತುಷಾರ್ ಗಿರಿನಾಥ್ ಗೆ ಸಂಕಷ್ಟ ಎದುರಾಗಿದೆ.ಚಿಲುಮೆ ಸಂಸ್ಥೆಗೆ ಮತದಾರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಅವಕಾಶ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.ಮಾಜಿ ಪರಿಷತ್‌ ಸದಸ್ಯ ರಮೇಶ್ ಬಾಬು ಅವರು ಬರೆದ ಪತ್ರದ ಮೇರೆಗೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ತನಿಖೆ ನಡೆಸುವಂತೆ ಸಿಎಂ ಸೂಚನೆ ನೀಡಿದ್ದಾರೆ.ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ಹಾಗೂ ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ರಮೇಶ್ ಬಾಬು ಜುಲೈ 3 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈಗ ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ,ಈ ಬಗ್ಗೆ ಆಗಸ್ಟ್ ತಿಂಗಳಲ್ಲಿಯೇ ಸರ್ಕಾರ ವರದಿ ಕೇಳಿದೆ. ಮೊಕದ್ದಮೆ ವಿಳಂಬವಾಗಿ ಬೆಳಕಿಗೆ ಬಂದಿದೆ.ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ತೊಂದರೆ ಎದುರಾಗಿದೆ.

Exit mobile version