28 C
Bengaluru
Sunday, July 7, 2024

“ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಆರೋಪ: ಧೋನಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಮುಂದಾದ ಹೈಕೋರ್ಟ್:

ಚೆನ್ನೈ: ಜೂನ್-14:ಭಾರತ ಕ್ರಿಕೇಟ್ ತಂಡದ ಮಾಝಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ರವರು ತಮ್ಮ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಪ್ರಕರಣದ ವಿಚಾರಣೆಯನ್ನು ನಡೆಸಲು ಮದ್ರಾಸ್ ಹೈಕೋರ್ಟ್ ನಿರ್ಧರಿಸಿದೆ. ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ ಧೋನಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಅದರಂತೆ ನ್ಯಾಯಾಲಯವು ಜೂನ್ 15 ರಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.

100 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಈ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ತಾನು ಇಲ್ಲದಿದ್ದರೂ, ಗಂಭೀರ ಆರೋಪ ಮಾಡಿದ್ದ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ 2014 ರಲ್ಲಿ ಮಹೇಂದ್ರ ಸಿಂಗ್ ಧೋನಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಈ ಸಂಬಂಧ ವಿಚಾರಣೆ ನಡೆಸಲು ತಮಿಳುನಾಡು ಹೈಕೋರ್ಟ್ ಮುಂದಾಗಿದೆ.

ಏನಿದು ಪ್ರಕರಣ:
2013ರಲ್ಲಿ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ಅವರು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸುತ್ತಿದ್ದರು. ಆ ವೇಳೆ ಧೋನಿ ವಿರುದ್ಧ ಹೇಳಿಕೆ ನೀಡಿದಲ್ಲದೆ, ಮ್ಯಾಚ್ ಫಿಕ್ಸಿಂಗ್ ಆರೋಪವನ್ನೂ ಮಾಡಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ತನ್ನದೇನು ಪಾತ್ರವಿಲ್ಲ ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ನಿಷೇದದ ನಂತರ ಸಿಎಸ್​ಕೆ ಭರ್ಜರಿ ಕಂಬ್ಯಾಕ್:
2 ವರ್ಷಗಳ ನಿಷೇಧದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಕಂಬ್ಯಾಕ್ ಮಾಡಿತ್ತು. 2018 ರಲ್ಲಿ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಸಿಎಸ್​ಕೆ ತಂಡವು, ಆ ಬಳಿಕ 2021 ರಲ್ಲಿ ಹಾಗೂ 2023 ರಲ್ಲಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

Related News

spot_img

Revenue Alerts

spot_img

News

spot_img