22.9 C
Bengaluru
Friday, July 5, 2024

ಆ.31ರೊಳಗೆ ಪ್ರತಿಯೊಬ್ಬರೂ e-KYC ಮಾಡಿಸುವುದು ಕಡ್ಡಾಯ, ಇಲ್ಲ ಅಂದ್ರೆ ತಿಂಗಳ ರೇಷನ್ ಮತ್ತು ಅಕ್ಕಿ ಹಣ ಸಿಗಲ್ಲ

#everyone #e-KYC #August31 #ration #ricemoney
ಬೆಂಗಳೂರು : ಪಡಿತರ ಚೀಟಿ(Rationcard) ಫಲಾನುಭವಿಗಳ ಇ-ಕೆವೈಸಿ(E-KYC) ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ.ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ ಇದ್ದು, ಅಂತಹ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸಲಾಗುತ್ತದೆ. ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಫಲಾನುಭವಿಗಳು ಆಗಸ್ಟ್ 31 ರೊಳಗಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು.ಬ್ಯಾಂಕ್‌ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಚೀಟಿ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ದುಡ್ಡು ಸಿಗಲಿದೆ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಬ್ಯಾಂಕ್ ಖಾತೆಯ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲೇ ನೀಡಬೇಕು ಎಂದು ಸರ್ಕಾರ ತಿಳಿಸಿದೆ. ಆಧಾರ್ ಲಿಂಕ್(Aadhar link) ಆಗದೇ ಇರುವ, ಸಕ್ರೀಯ ಬ್ಯಾಂಕ್‌ಖಾತೆ ಇಲ್ಲದೇ ಇರುವ ಮತ್ತು ಬ್ಯಾಂಕ್(Bank) ಇ-ಕೆವೈಸಿ ಆಗದೇ ಇರುವ ಅಂತ್ಯೋದಯ ಅನ್ನಭಾಗ್ಯ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್) ಫಲಾನುಭವಿಗಳು, ಅವುಗಳನ್ನು ಸರಿಪಡಿಸಿಕೊಳ್ಳಲು ಆಹಾರ ಇಲಾಖೆಯ ಉಪ ನಿರ್ದೇಶಕರು ಸೂಚಿಸಿದ್ದಾರೆ. ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎನ್ನಲಾಗಿದೆ.ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಕೊಳ್ಳದೆ ಇರುವಂತಹ ಪಡಿತರ ಚೀಟಿಗಳ ಸದಸ್ಯರುಗಳನ್ನು ಪಡಿತರ ಚೀಟಿಯಿಂದ ಅಮಾನತುಗೊಳಿಸುವ ಮೂಲಕ ಆಹಾರಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸೆಪ್ಟೆಂಬರ್ ತಿಂಗಳಿನಿಂದ ಸ್ಥಗಿತಗೊಳಿಸಲಾಗುವುದು.

Related News

spot_img

Revenue Alerts

spot_img

News

spot_img