22.7 C
Bengaluru
Monday, December 23, 2024

ಯುವನಿಧಿ ಯೋಜನೆ ಹಣ ಪಡೆಯಲು ಫೆ.29 ರೊಳಗೆ ʻಸ್ವಯಂಘೋಷಣೆʼ ಅಪ್ ಲೋಡ್ ಕಡ್ಡಾಯ

ಬೆಂಗಳೂರು;ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ₹3,000 ಮತ್ತು ₹1,500 (ಯುವನಿಧಿ) ನೀಡುತ್ತಿದೆ. ಆದರೆ, ಪ್ರತಿ ತಿಂಗಳು ‘ ಸ್ವಯಂ ಘೋಷಣೆ’ಯೊಂದನ್ನು ನೀವು ಮಾಡದಿದ್ದರೆ, ನಿಮ್ಮ ಖಾತೆಗೆ ಆ ಹಣ ಬರುವುದಿಲ್ಲ. ‘ನಾನು ನಿರುದ್ಯೋಗಿ, ಶಿಕ್ಷಣ ಮುಂದುವರಿಸುತ್ತಿಲ್ಲ & ಸ್ವಯಂ ಉದ್ಯೋಗಿಯಲ್ಲ’ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಲೇಬೇಕು. ಈ ಬಗ್ಗೆ ಫಲಾನುಭವಿಗಳಿಗೆ SMS ಕಳುಹಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್‌ಸೈಟ್ ವೀಕ್ಷಿಸಬಹುದು,ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-25189112 ಸಂಪರ್ಕಿಸಬಹುದು ಎಂದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಯುವನಿಧಿ ಯೋಜನೆ (Yuva Nidhi Scheme) ಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ,ಫೆ.29ರ ವರೆಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ (Self Declaration Certificate) ವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯಬಹುದಾಗಿದೆ.

Related News

spot_img

Revenue Alerts

spot_img

News

spot_img