23 C
Bengaluru
Tuesday, November 12, 2024

ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮನೆ ಮೇಲೆ ಐಟಿ ದಾಳಿ

ಹಾವೇರಿ: ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ತಡರಾತ್ರಿವರೆಗೆ ಶೋಧ ಕಾರ್ಯ ಮುಂದುವರೆದಿತ್ತು.ಶಂಕರ್‌ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್‌ ಭಾವಚಿತ್ರ ಇರುವ ಸೀರೆ ಬಾಕ್ಸ್,‌ ತಟ್ಟೆ– ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್‌ ಬ್ಯಾಗ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ‌ ವಶಕ್ಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್ ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.ದಾಳಿ ವೇಳೆ ಅಧಿಕಾರಿಗಳು ಆರ್.ಶಂಕರ್ ನಿವಾಸದಲ್ಲಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಪತ್ರ, ಬಿಲ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ಬಳಿಕ ಹಾವೇರಿ ಎಸಿ ನಾರಾಯಣರೆಡ್ಡಿ ಕನಕರೆಡ್ಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಇನ್ನು ಚುನಾವಣೆ ನಿಯಮ ಉಲ್ಲಂಘಣೆ ಮಾಡಿದ್ದಾರಾ ಎಂಬುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ದಾಳಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಒಪ್ಪಿಗೆ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗುವುದು ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಮಾಹಿತಿ ನೀಡಿದ್ದಾರೆ.ಹಾವೇರಿ ಉಪವಿಭಾಗಾಧಿಕಾರಿ ಅವರಿಗೆ ದಾಖಲೆ ಪತ್ರ, ಬಿಲ್‌ ಮತ್ತು ಸ್ಟಾಕ್‌ ಚೆಕ್‌ ತಪಾಸಣೆ ನಡೆಸಲು ವಾಣಿಜ್ಯ ತೆರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ.ಆರ್.ಶಂಕರ್ ಅವರ ಗೆಲವು ಕಂಡು ಅನೇಕ ರಾಜಕೀಯ ಮುಖಂಡರು ಭಯಗೊಂಡಿದ್ದಾರೆ. ಅದಕ್ಕೆ ಷಡ್ಯಂತ್ರ ಮಾಡಿ ತಪ್ಪು ಮಾಹಿತಿ ನೀಡಿದ್ದಾರೆ. ನಾವೆಲ್ಲರೂ ಆರ್.ಶಂಕರ್ ಪರ ನಿಲ್ಲುತ್ತೇವೆ. ನಮ್ಮ ನಾಯಕರ ಬಳಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಮತ್ತು ಬಿಲ್​ಗಳಿವೆ. ಎಲ್ಲವನ್ನೂ ಅಧಿಕಾರಿಗಳ ಮುಂದೆ ಹಾಜರುಪಡಿಸುತ್ತಾರೆ ಎಂದು ಆರ್.ಶಂಕರ್ ಬೆಂಬಲಿಗರು ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img