#IT Raids #Alleged tax evasion# IT raids # businessman’s house # Bangalore
ಬೆಂಗಳೂರು ನ21;ಬೆಂಗಳೂರಿನಲ್ಲಿ ನಿನ್ನೆ 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾದ ಬೆನ್ನಲ್ಲೇ ಈಗ ಐಟಿ ರೈಡ್(IT Raid) ಆಗಿದೆ. ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ.ಇಂದು ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರುಗಳಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ETA ಗಾರ್ಡನ್ ಅಪಾರ್ಟ್ಮೆಂಟ್‌ನಲ್ಲಿರುವ(Garden Apartment) ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.ಆಡುಗೋಡಿ(Aadugodi) ಬಳಿಯ ಆಕ್ರೋಪೊಲಿಸ್ ಅಪಾರ್ಟ್ಮೆಂಟ್‌ನಲ್ಲಿಯೂ ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಕ್ಕಿ ಘೋಷ್ ಎಂಬವರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿಯಾಗಿರುವ ರಿಕ್ಕಿ ಘೋಷ್ ನೆಲೆಸಿರುವ ಅಪಾರ್ಟ್ಮೆಂಟ್‌ನಲ್ಲಿ ಹುಡುಕಾಟ ನಡೆಯುತ್ತಿದೆ.ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ(Incometax) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮಾಗಡಿ ರಸ್ತೆ, ಆಡೂಗೋಡಿ ಸೇರಿದಂತೆ ವಿವಿಧೆಡೆಗಳಲ್ಲಿ ತೆರಿಗೆ ಅಧಿಕರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಟಿ(Incometax) ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಅನೇಕ ಕಡೆಗಳಲ್ಲಿ ಡ್ರೈಫ್ರಟ್’ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.