#IT #Raids #Jewelry stores #cosatal areas
ಮಂಗಳೂರು : ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ರಾಜ್ಯ ಲೋಕಾಯುಕ್ತ(Lokayukta) ದಾಳಿಯಾಗಿತ್ತು. ಇದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ(cosatal areas) ಭಾಗದಲ್ಲಿ ಐಟಿ ದಾಳಿಯಾಗಿದೆ,ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ(Jewelry stores) ಮೇಲೆ ಐಟಿ(Incometax) ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಎರಡು ಟೂರಿಸ್ಟ್ ಇನೋವಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳು, ಶಿವಭಾಗ್ ನ ಆಭರಣ ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಶಿವಭಾಗ್ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನ ಆಭರಣ ಜ್ಯುವೆಲ್ಲರಿ(Jewelry stores) ಅಂಗಡಿಯಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಸಲವಾಗಿದ್ದು,ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಶಿವಭಾಗ್ ಆಭರಣ ಅಂಗಡಿ. ರಾಜ್ಯದಲ್ಲಿ ಒಟ್ಟು 14 ಮಳಿಗೆಗಳು ಹಾಗೂ ಗೋವಾದಲ್ಲಿ ಒಂದು ಮಳಿಗೆ ಇದೆ. 1935 ರಲ್ಲಿ ಉಡುಪಿಯಲ್ಲಿ ಮೊದಲ ಶಿವಭಾಗ್ ಆಭರಣ ಅಂಗಡಿ ಪ್ರಾರಂಭವಾಗಿತ್ತು. ಇದೀಗ ಉಡುಪಿ(Udupi) ಹಾಗೂ ಮಂಗಳೂರು(Manglore) ಜಿಲ್ಲೆಗಳಲ್ಲಿ ಶಿವಭಾಗ್ ಆಭರಣ ಮಳಿಗೆಗಳು ತಲೆ ಎತ್ತಿವೆ.