Revenue Facts

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ

ಬೆಂಗಳೂರು;ಮಾಜಿ ಸಚಿವ, ಕೆಆರ್‌ಪಿಪಿ(KRPP) ಸಂಸ್ಥಾಪಕ ಜನಾರ್ದನ ರೆಡ್ಡಿ ಅವರು ಬಿಜೆಪಿ(BJP) ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅವರು, ಮತ್ತೆ ಕಮಲ ಬಾವುಟವನ್ನು ಹಿಡಿದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಬಾವುಟ ನೀಡಿ, ರೆಡ್ಡಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಬಳ್ಳಾರಿ ಬಿಜೆಪಿ ಶ್ರೀರಾಮುಲು, ಜನಾರ್ದನ ರೆಡ್ಡಿ ಪತ್ನಿ ಅರುಣಾ ಉಪಸ್ಥಿತರಿದ್ದರು. ಇದೇ ವೇಳೆ ತಮ್ಮ ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಗೊಳಿಸಿದರು.ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು.ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮಾಜಿ ಸಚಿವರೂ ಆಗಿರುವ ಗಾಲಿ ಜನಾರ್ದನ ರೆಡ್ಡಿ, “ಯಾವುದೇ ಷರತ್ತು, ಫಲಾಪೇಕ್ಷೆ ಇಲ್ಲದೆ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ. ಮರಳಿ ತಾಯಿಯ ಮಡಿಲಿಗೆ ಬಂದಂತಾಗಿದೆ,” ಎಂದು ಹೇಳಿದರು.

Exit mobile version