Revenue Facts

ನವೆಂಬರ್ 27 ರಂದು ಮುಖ್ಯಮಂತ್ರಿ ಅವರಿಂದ ಜನತಾ ದರ್ಶನ

ನವೆಂಬರ್ 27 ರಂದು ಮುಖ್ಯಮಂತ್ರಿ ಅವರಿಂದ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು(Report) ಸ್ವೀಕರಿಸಲಿದ್ದಾರೆ.ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸಿಎಂ ಸಿದ್ದರಾಮಯ್ಯಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.ಮುಂದಿನ ಹಂತದಲ್ಲಿ ತಾಲೂಕು ಮಟ್ಟದಲ್ಲಿಯೂ ಜನತಾದರ್ಶನ ನಡೆಸಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಜನತಾದರ್ಶನದಲ್ಲಿ ಜನಸಾಮಾನ್ಯರ ಸಮಸ್ಯೆ, ವರದಿಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸಿಕೊಡಲಾಗುತ್ತದೆ.

 

Exit mobile version