Revenue Facts

ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌ ಮಳಿಗೆ ಹಂಚಿಕೆ ಹಗರಣ:ಸಿಐಡಿ ತನಿಖೆಗೆ ಎನ್.ಆರ್.ರಮೇಶ್ ಆಗ್ರಹ

ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌ ಮಳಿಗೆ ಹಂಚಿಕೆ ಹಗರಣ:ಸಿಐಡಿ ತನಿಖೆಗೆ ಎನ್.ಆರ್.ರಮೇಶ್ ಆಗ್ರಹ

ಬೆಂಗಳೂರು,- ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ 312 ನೂರಾರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಭ್ರಷ್ಟಾಚಾರನಡೆಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಎಂದು ಪಾಲಿಕೆಯ ಮಾಜಿ ನಾಯಕ, ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ತಿಳಿಸಿದರು. ಹಗರಣ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ ಎಂದು ಆರೋಪಿಸಿದರು.

ಲೋಕಾಯುಕ್ತರಿಗೆ ದೂರು ನೀಡಿ ಪಾಲಿಕೆಯ ಕೇಂದ್ರ ಕಚೇರಿಯಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಮೊದಲು ಇದ್ದ ಮಳಿಗೆಗಳ ಮಾಲೀಕರಿಗೆ ಮಾತ್ರವೇ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಮಳಿಗೆಗಳನ್ನು ಹಂಚಿಕೆ ಮಾಡುವ ಪ್ರಸ್ತಾವನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾರುಕಟ್ಟೆ ವಿಭಾಗದಲ್ಲಿ ಮೊದಲು ಅನುಮೋದನೆಯಾಗಿತ್ತು.ತೆರವುಗೊಳಿಸಲಾದ ಹಳೆಯ ಕಟ್ಟಡದಲ್ಲಿ ಕಳೆದ 45 ವರ್ಷದಿಂದ ವ್ಯಾಪಾರ – ವಹಿವಾಟು ನಡೆಸುತ್ತಿದ್ದ 132 ಮಳಿಗೆಗಳ ಮಾಲೀಕರಿಗೆ ಮಾತ್ರವೇ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಮಳಿಗೆಗಳನ್ನು ಹಂಚಿಕೆ ಮಾಡುವ ಪ್ರಸ್ತಾವನೆ ಬಿಬಿಎಂಪಿ ಮಾರುಕಟ್ಟೆ ವಿಭಾಗದಲ್ಲಿ ಅನುಮೋದನೆ ಮಾಡಲಾಗಿತ್ತು.

312 ಮಳಿಗೆಗಳ ಅನಧಿಕೃತ ಹಂಚಿಕೆ:
ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಈ ಹಿಂದೆ ಇದ್ದಂತಹ ವಾಣಿಜ್ಯ ಮಳಿಗೆಗಳಿದ್ದ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾರುಕಟ್ಟೆ ವಿಭಾಗದ ಅಧಿಕಾರಿಗಳು ಮತ್ತು ದಕ್ಷಿಣ ವಲಯದ ಜಂಟಿ ಆಯುಕ್ತರು ಸ್ಥಳೀಯ ಜನಪ್ರತಿನಿಧಿಗಳ ಪ್ರಭಾವಕ್ಕೆ ಮಣಿದು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಹಳೆಯ ಕಟ್ಟಡದಲ್ಲಿದ್ದ ಮೂಲ 132 ಮಳಿಗೆಗಳನ್ನು ಹೊರತುಪಡಿಸಿ, ಕಟ್ಟಡದ ಮೊದಲ ಮಹಡಿಯಲ್ಲಿ 245 ಮಳಿಗೆಗಳನ್ನು, ಒಂದನೇ ಮಹಡಿಯಲ್ಲಿ 55 ಮಳಿಗೆಗಳನ್ನು, ಎರಡನೇ ಮಹಡಿಯಲ್ಲಿ 20 ಮಳಿಗೆಗಳು, ಮೂರನೇ ಮಹಡಿಯಲ್ಲಿ 104 ಮಳಿಗೆಗಳನ್ನು ಹೆಚ್ಚುವರಿಯಾಗಿ ಸಿಕ್ಕ ಸಿಕ್ಕವರಿಗೆ ತಮ್ಮ ಸ್ವಾರ್ಥಕ್ಕಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
.
ಹೆಚ್ಚುವರಿ ಹಣ ವಸೂಲಿ:
ಒಂದೊಂದು ಮಳಿಗೆಗೆ 25 ರಿಂದ 30 ಲಕ್ಷ ಹಣ ವಸೂಲಿ ಮಾಡಲಾಗಿದೆ. ಮಾಜಿ ನಗರಸಭೆ ಸದಸ್ಯೆ ಲತಾ ವೆಂಕಟೇಶ್, ಪತಿ ವೆಂಕಟೇಶ್ ಮತ್ತು ಅವರ ಕುಟುಂಬದ ಸದಸ್ಯರ ಹೆಸರುಗಳಲ್ಲಿ ಒಟ್ಟು 13 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಕಟ್ಟಡದ ತಳ ಮಹಡಿ (Basement) ಯಲ್ಲಿ 14 ಮಳಿಗೆಗಳನ್ನು ಅಕ್ರಮವಾಗಿ ನಿರ್ಮಿಸಿ ಹಂಚಿಕೆ ಮಾಡಿದ್ದಾರಲ್ಲದೇ, ಅದೇ ಕಟ್ಟಡದ ನೆಲ ಮಹಡಿಯ ಹಿಂಭಾಗದ Passage ನಲ್ಲಿ 02 ಮಳಿಗೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದ್ದಾರೆ. ಇದೇ ಕಟ್ಟಡಕ್ಕೆ ಹೊಂದಿಕೊಂಡಂತಿದ್ದ – Syndicate Bank ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡದಲ್ಲಿ 04 ಮಳಿಗೆಗಳನ್ನು ನಿರ್ಮಿಸಿ ನಿಯಮಬಾಹಿರವಾಗಿ ಹಂಚಿಕೆ ಮಾಡಿದ್ದಾರೆ.

ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ: ಈ ಬೃಹತ್‌ ಹಗರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಎಂದು ಮುಖ್ಯಮಂತ್ರಿಗಳನ್ನು ಕೇಳಿಕೊಂಡಿದ್ದೇನೆ. ಹತ್ತಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿರುವ ಈ ಹಗರಣಕ್ಕೆ ಸಂಬಂಧಿಸಿದಂತೆ,312 ಅಧಿಕ ವಾಣಿಜ್ಯ ಮಳಿಗೆಗಳನ್ನು ಹಂಚಿಕೆ ಮಾಡಿ ಹತ್ತಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಈ ಬೃಹತ್ ಹಗರಣವನ್ನು CID ತನಿಖೆಗೆ ವಹಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಗಿದೆ. ಹಾಗೆಯೇ ಈ ಬೃಹತ್ ಭ್ರಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಭ್ರಷ್ಟ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ವಹಿಸಬೇಕೆಂದು ಪಾಲಿಕೆಯ ಮಾನ್ಯ ಮುಖ್ಯ ಆಯುಕ್ತರು ಮತ್ತು ಆಡಳಿತಾಧಿಕಾರಿಗಳನ್ನು ಆಗ್ರಹಿಸಲಾಗಿದೆ.ರಾಜಕಾರಣಿಯೊಬ್ಬರ ಶಿಫಾರಸ್ಸು ಪತ್ರಕ್ಕೆ ಸ್ಪಂದಿಸಿ, ಉಮೇಶ್ ಎಂಬ ಒಬ್ಬನೇ ವ್ಯಕ್ತಿಯ ಹೆಸರಿಗೆ 04 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಎನ್​ ಆರ್​ ರಮೇಶ್​ ಗಂಭೀರ ಆರೋಪ ಮಾಡಿದರು.

ಬಿಬಿಎಂಪಿ ಅಧಿಕಾರಿಗಳು ಭಾಗಿ
ಪಾಲಿಕೆಯ ಮಾರುಕಟ್ಟೆ ವಿಭಾಗದ ಉಪ ಆಯುಕ್ತರಾಗಿದ್ದ ಹೇಮಂತ್ ಶರಣ್, ನಾಗೇಂದ್ರ ನಾಯಕ್, ಮುರಳೀಧರ್, ಪಾಲಿಕೆಯ ಮಾರುಕಟ್ಟೆ ವಿಭಾಗದ ಕಂದಾಯ ಅಧಿಕಾರಿಗಳಾದ ವರಲಕ್ಷ್ಮಿ, ಮಂಜುಳ ಹಾಗೂ ಸಹಾಯಕ ಕಂದಾಯ ಅಧಿಕಾರಿಗಳಾದ ಕಾಂಚನಾ ಮತ್ತು ಶಿವಕುಮಾರ್ ಅವರುಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದು ತಪ್ಪಿತಸ್ಥರ ವಿರುದ್ಧ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರು ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Exit mobile version