ದೆಹಲಿ;ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧಿಕೃತ ಮುದ್ರೆ ಒತ್ತಿದ್ದಾರೆ. ದೆಹಲಿಯಲ್ಲಿಂದು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಎನ್‌ಡಿಎ ಸೇರುವುದಾಗಿ ಘೋಷಿಸಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲಿವೆ. ಶೀಘ್ರದಲ್ಲೇ ಸೀಟು ಹೊಂದಾಣಿಕೆ ಬಗ್ಗೆ ಸ್ಪಷ್ಟತೆ ಸಿಗಲಿದೆ.ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು. ಮೈತ್ರಿ ಬಗ್ಗೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು HDK ಮಾಹಿತಿ ನೀಡಿದ್ದಾರೆ,ನಮಗೆ ಎಷ್ಟು ಸೀಟ್ ಕೊಡುತ್ತಾರೆ ಎಂಬುದು ಮುಖ್ಯ ಅಲ್ಲ, ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ . ಮೈತ್ರಿ ಸುಗಮವಾಗಿ ನಡೆಯಲಿದೆ ಎಂದರು.ತುಮಕೂರು, ಮಂಡ್ಯ, ಹಾಸನ, ಕೋಲಾರ, ಬೆಂ. ಗ್ರಾಮಾಂತರ & ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡಬೇಕೆಂಬ ಬೇಡಿಕೆಯನ್ನು ಮಾಜಿ ಸಿಎಂ HDK, ಅಮಿತ್ ಶಾ ಮುಂದಿಟ್ಟಿದ್ದಾರೆ ಎನ್ನಲಾಗಿದೆ.