Revenue Facts

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ನೇಮಕ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ನೇಮಕ

ಬೆಂಗಳೂರು ಮೇ 22: ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ. ಸುನಂದಮ್ಮ ಅವರು ಈ ಬಗ್ಗೆ ಆದೇಶವನ್ನು ಹೊಡಡಿಸಿದ್ದು, ಅದರಲ್ಲಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಚಿವರಿಗೆ ಎಲ್ಲ ಸೌಲಭ್ಯಗಳು ಅವರಿಗೆ ಲಭ್ಯವಾಗಲಿದೆ ಅಂತ ತಿಳಿಸಿದ್ದಾರೆ.

ನಾಡಿನ ಹಿರಿಯು ಪತ್ರಕರ್ತ ಕೆ.ವಿ. ಪ್ರಭಾಕರ್ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕನ್ನಡ ಪತ್ರಿಕೋದ್ಯಮದಲ್ಲಿ ಅವರು ತಮ್ಮ ವಿವಿಧ ಬರಹಗಳ ಮೂಲಕ ಓದುಗರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನವನ್ನು ಹೊಂದಿದ್ದಾರೆ.ದಿನಾಂಕ 20-05-2023ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದಾರೆ.

Exit mobile version