Revenue Facts

IT ರಿಟರ್ನ್ಸ್ ಫೈಲ್ ಮಾಡಲು ಜುಲೈ 31 ಕೊನೆಯ ದಿನ;ಗಡುವು ವಿಸ್ತರಣೆ ಇಲ್ಲ

ನವದೆಹಲಿ ಜುಲೈ17;ಪ್ರಸ್ತುತ ಮೌಲ್ಯಮಾಪನ ವರ್ಷಕ್ಕೆ  ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ,ಕಳೆದ ವರ್ಷದಂತೆ ಗಡುವನ್ನು ವಿಸ್ತರಿಸಲಾಗುವುದಿಲ್ಲ ಎಂದು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.ಕೊನೆಯ ಕ್ಷಣದವರೆಗೆ ಕಾಯುವುದಕ್ಕಿಂತ ಮುಂಚಿತವಾಗಿ ಐಟಿ ರಿಟರ್ನ್ಸ್ ಸಲ್ಲಿಸುವುದು ಉತ್ತಮ.ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಐಟಿ ರಿಟರ್ನ್ಸ್ ಸಲ್ಲಿಕೆ ಆಗಲಿವೆ ಎಂಬ ನಿರೀಕ್ಷೆ ಇದೆ. ಕಳೆದ ವರ್ಷ ಜುಲೈ 31 ರವರೆಗೆ ಸುಮಾರು 5.83 ಕೋಟಿ ಐಟಿ ರಿಟರ್ನ್‌ಗಳನ್ನು ಸಲ್ಲಿಸಲಾಗಿತ್ತು. ಇದು 2022-23 ರ ಮೌಲ್ಯಮಾಪನ ವರ್ಷಕ್ಕೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನವಾಗಿತ್ತು ಎಂದು ಮಲ್ಹೋತ್ರಾ ಹೇಳಿದರು.ಜುಲೈ 31ರ ಗಡುವು ಸಮೀಪಿಸುತ್ತಿರುವ ಕಾರಣ, ಸಾಧ್ಯವಾದಷ್ಟು ಬೇಗ ತಮ್ಮ ತೆರಿಗೆ ರಿಟರ್ನ್ಸ್ ಸಲ್ಲಿಸಲು ನಾನು ಅವರಿಗೆ ಸಲಹೆ ನೀಡುತ್ತೇನೆ ಎಂದು ಮಲ್ಹೋತ್ರಾ ಅವರು ಹೇಳಿದರು.

2023-24 ರ ಸಾಮಾನ್ಯ ಬಜೆಟ್ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರವು 33.61 ಲಕ್ಷ ಕೋಟಿ ರೂಪಾಯಿಗಳ ಒಟ್ಟು ತೆರಿಗೆಯನ್ನು ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಹೇಳಿದರು.ಈ ಗಡುವಿನ ನಂತರವೂ ನೀವು ದಂಡವನ್ನು ಪಾವತಿಸಬಹುದು ಮತ್ತು ಡಿಸೆಂಬರ್ 31 ರವರೆಗೆ ರಿಟರ್ನ್ಸ್ ಸಲ್ಲಿಸಬಹುದು. ಅಷ್ಟರೊಳಗೆ ರಿಟರ್ನ್ಸ್ ಸಲ್ಲಿಸದಿದ್ದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ.

Exit mobile version