25 C
Bengaluru
Tuesday, April 29, 2025

ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯಪಾಲರ ಒಪ್ಪಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ ಕಾನೂನು ಜಾರಿ ಮಾಡಲಾಗಿದೆ.ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯವಾಗಿದೆ.ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(Amdendment) ಅಧಿನಿಯಮ-2024 ಅನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಸಲಾಗಿತ್ತು.ಇಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕತ 2024 ದಿನಾಂಕ 25-02-2024ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ ಮಾಡಲಾಗಿದೆ.ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆ, ವಾಣಿಜ್ಯ, ವ್ಯವಹಾರ, ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಪ್ರಯೋಗಾಲಯ, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಮೊದಲಾದವುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇಕಡ 60ರಷ್ಟು ಹಾಕಬೇಕು. ಕನ್ನಡ ಭಾಷೆ ನಾಮ ಫಲಕದ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕು ಎಂದು ಹೇಳಲಾಗಿದೆ.

Related News

spot_img

Revenue Alerts

spot_img

News

spot_img