ಬೆಂಗಳೂರು: 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿದ 10 ಸಂಘ ಸಂಸ್ಥೆಗಳಿಗೆ ಸೇರಿ ಒಟ್ಟು 68 ಜನ ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನ ಸಿಎಂ ನಿವಾಸದಲ್ಲಿ ಸಭೆ ಮುಗಿದ ಬಳಿಕ ಮಾತನಾಡಿ, ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ 3,523 ಅರ್ಜಿಗಳು ಬಂದಿದ್ದವು. ಆಯ್ಕೆ ಸಮಿತಿ ಸದಸ್ಯರು ಈಗಾಗಲೇ ಅರ್ಹರನ್ನು ಆಯ್ಕೆ ಮಾಡಿದ್ದಾರೆ. ಸಮಿತಿಯ ಸದಸ್ಯರೂ ಕೂಡ ಸಿಎಂ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದಿದ್ದಾರೆ.ಎರಡು ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.ರಾಜ್ಯೋತ್ಸವ ಪ್ರಶಸ್ತಿಗಾಗಿ ಭೌತಿಕವಾಗಿ 2,500, ಸೇವಾ ಸಿಂಧು ಪೋರ್ಟಲ್ ಮೂಲಕ 3,523ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಸುಮಾರು 23 ಸಾವಿರಕ್ಕೂ ಅಧಿಕ ಜನ 2000 ಮಂದಿ ಸಾಧಕರನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ, ಮಾಡಿದ್ದಾರೆ.ಈ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಕೆಲ ಮಾನದಂಡ, ಸಲಹೆ ಸೂಚನೆಗಳು ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ