ಬೆಂಗಳೂರು;ಅಯೋಧ್ಯೆಯ ರಾಮ ಮಂದಿರ(Rammandir)ದಲ್ಲಿ ಪ್ರಾಣ ಪ್ರತಿಷ್ಠಾಗೊಳ್ಳಲು ಮೈಸೂರು ಮೂಲದ ಅರುಣ್ ಯೋಗಿರಾಜ್(Arun Yogiraj) ಕೆತ್ತನೆ ಮಾಡಿದ ರಾಮಲಲ್ಲಾನ ಹೊಸ ಪ್ರತಿಮೆ ಆಯ್ಕೆಯಾಗಿದೆ. ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಶಿಲ್ಪಿ ಅರುಣ್ ಯೋಗಿರಾಜ್‌ಗೆ ಬೆಂಗಳೂರಿನ ಗಣೇಶ್ ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಸಾಥ್ ನೀಡಿದ್ದಾರೆ. ಇದೇ ತಿಂಗಳು 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ.ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿಸಿದ ರಾಮ್ ಲಲ್ಲಾ ಪ್ರತಿಮೆಯನ್ನು ಜನವರಿ 22 ರಂದು ಅಯೋಧ್ಯೆಯ ರಾಮ ದೇವಾಲಯದಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಖಚಿತಪಡಿಸಿದ್ದಾರೆ. ಕಲ್ಲಿನ ಪ್ರತಿಮೆಯು 150 ಕೆಜಿಯಿಂದ 200 ಕೆಜಿ ತೂಕವಿರುತ್ತದೆ ಎನ್ನಲಾಗಿದೆ.ಜನವರಿ 17 ರಂದು ವಿಗ್ರಹವನ್ನು ಹೊಸ ದೇವಾಲಯಕ್ಕೆ ಕೊಂಡೊಯ್ಯಲಾಗುವುದು. ರಾಮ್ ಲಲ್ಲಾ ಅವರ ಅಸ್ತಿತ್ವದಲ್ಲಿರುವ ವಿಗ್ರಹವನ್ನು ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇಡಲಾಗುವುದು ಎಂದು ರೈ ಘೋಷಿಸಿದರು.ದೇಶದ ಮೂವರು ಪ್ರಮುಖ ಶಿಲ್ಪಿಗಳಾದ ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರಿಗೆ ರಾಮಲಲ್ಲಾ ಮೂರ್ತಿಯನ್ನು ತಯಾರಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ಮೂವರೂ ಶಿಲ್ಪಿಗಳು ತಮ್ಮ ಕಲ್ಪನೆಯ ರಾಮ ಲಲ್ಲಾನ (Ramlalla)ಮೂರ್ತಿಯನ್ನು ನಿರ್ಮಿಸಿ ಸಮರ್ಪಿಸಿದ್ದಾರೆ. ಇವುಗಳ ಪೈಕಿ ಕನ್ನಡಿಗ ಅರುಣ್ ಯೋಗಿರಾಜ್ ಅವರು ಮೂರ್ತಿ ಆಯ್ಕೆಯಾಗಿದೆ.ಅರುಣ್ ಅವರು ರಚನೆ ಆಯ್ಕೆಯಾಗಲು ಮೊದಲ ಕಾರಣವೇ ವಿಗ್ರಹ ಮುಖದಲ್ಲಿನ ತೇಜಸ್ಸು. ಅದರಲ್ಲಿ ಹೆಚ್ಚು ದೈವಿಕ ಭಾವವಿದೆ ,ಪ್ರಾಣಪ್ರತಿಷ್ಠೆ ಆಗಲಿರುವ ವಿಗ್ರಹವು ಬಾಲ ರಾಮನಾಗಿದೆ ಎಂಬುದು ಇಲ್ಲಿ ಗಮನಾರ್ಹ. ಅಂತೆಯೇ ಅರುಣ್ ಅವರ ಕೆತ್ತನೆಯ ವಿಗ್ರಹದಲ್ಲಿ ಮುಗ್ಧ ಮಗುವಿನ ಸುಂದರ ನೋಟವಿದೆ. ರಾಮನ ಮೂರ್ತಿಯು 51 ಇಂಚು ಎತ್ತರವಿದ್ದರೆ ಪ್ರಭಾವಳಿ ಸೇರಿದಂತೆ ಒಟ್ಟು ವಿಗ್ರಹ 8 ಅಡಿ ಎತ್ತರ ಹಾಗೂ ಮೂರುವರೆ ಅಡಿ ಅಗಲವಿದೆ. ಇದು ತೇಜಸ್ಸಿನಿಂದ ಕಂಗೊಳಿಸುತ್ತಿದೆ.
ಅಯೋಧ್ಯೆಯಲ್ಲಿ ‘ಕನ್ನಡಿಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ‘ಪ್ರತಿಷ್ಠಾಪನೆ
by RF Desk