21.4 C
Bengaluru
Tuesday, December 24, 2024

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು

ಬೆಂಗಳೂರು ಮೇ 01: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಹಿನ್ನೆಲೆ ಬಿಜೆಪಿ ಜನರ ಹೆಸರಿನಲ್ಲಿ ಪ್ರಜಾ ಪ್ರಣಾಳಿಕೆ’ ಯನ್ನು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಡುಗಡೆ ಮಾಡಿದರು.ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು.ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಹೆಸರಿನಲ್ಲಿ ನೀಡಿರುವ ಭರವಸೆಗಳ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿರುವ ಬಿಜೆಪಿಯು ಇದೀಗ ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ.

ಬಿಜೆಪಿ ಪ್ರಣಾಳಿಕೆಯ ಅಂಶಗಳು

• ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ

• ಬಿಪಿಎಲ್ ಕುಟುಂಬಗಳಿಗೆ ಉಚಿತ 3 ಗ್ಯಾಸ್( ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್)

• ಪೋಷಣೆ ಸ್ಕೀಮ್ ( ಬಿಪಿಎಲ್ ಕುಟುಂಬಗಳಿಗೆ ಪ್ರತಿ ನಿತ್ಯ ಅರ್ಧ ಲೀಟರ್ ನಂದಿನಿ ಹಾಲು

• ಕರ್ನಾಟಕ ಅಪಾರ್ಟ್ಮೆಂಟ್ ಓನರ್ ಶಿಪ್ ಆಕ್ಟ್ ತಿದ್ದುಪಡಿಗೆ ಭರವಸೆ

• ಒನಕೆ ಓಬವ್ವಸಾಮಾಜಿಕ ನ್ಯಾಯ ನಿಧಿ’ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುವುದು

• ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ  ಜಾರಿಗೊಳಿಸುವುದು.

• ಸರ್ಕಾರಿ ಶಾಲೆಗಳ ಉನ್ನತೀಕರಣ ಭರವಸೆ

• .ವಿಶ್ವೇಶ್ವರಯ್ಯ ವಿದ್ಯಾ ಯೋಜನೆ’ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ

• ಹಿರಿಯ ನಾಗರೀಕರಿಗೆ ವಾರ್ಷಿಕ ಉಚಿತ ಮಾಸ್ಟರ್‌ ಹೆಲ್ತ್‌ ಚೆಕಪ್‌

• ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ

  • 500 ಕೋಟಿ ರೂ. ಮೊತ್ತದ ‘ಸಾವಯವ ಕೃಷಿ ಮಿಷನ್’​ ಜಾರಿ
  • ಪ್ರತಿ ಜಿಲ್ಲೆಯಲ್ಲಿ ಆಹಾರ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ
  • ಒಂದು ಸಾವಿರ ಕೋಟಿ ಮೊತ್ತದ ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ
  • ನೇಕಾರ ಸಮ್ಮಾನ ಯೋಜನೆಯಡಿ 1.5 ಲಕ್ಷ ನೇಕಾರರಿಗೆ ನೆರವು
  • ನೇಕಾರರಿಗೆ ನೀಡುವ ಧನಸಹಾಯ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಳ
  • ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
  • ಮೈಸೂರಿನಲ್ಲಿ ಅತಿದೊಡ್ಡ ಪುನೀತ್ ರಾಜ್​ಕುಮಾರ್​ ಫಿಲ್ಮ್​ಸಿಟಿ ಸ್ಥಾಪನೆ
  • ವಿಧವೆಯರ ಮಾಸಿಕ ಪಿಂಚಣಿ 800 ರೂ.ರಿಂದ 2 ಸಾವಿರಕ್ಕೆ ಹೆಚ್ಚಳ
  • ಎಲ್ಲಾ ತಾಲೂಕು ಕೇಂದ್ರಗಳಲ್ಲಿ ‘ಸ್ವದೇಶಿ ಕ್ರೀಡೆ’ ಕಬಡ್ಡಿ ತರಬೇತಿ ಕೇಂದ್ರ
  • ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ.
  • ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ.

Related News

spot_img

Revenue Alerts

spot_img

News

spot_img