26.3 C
Bengaluru
Tuesday, January 21, 2025

ವಿಧಾನಸಭೆ ಚುನಾವಣೆ 2023 : ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ ಆರಂಭ

ಬೆಂಗಳೂರು, ಏ. 13 : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮೇ 10 ರಂದು ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಿಗದಿಯಾಗಿದೆ. ಚುನಾವಣೆ ವೇಳಾಪಟ್ಟಿಯ ಪ್ರಕಾರ ಚುನಾವಣಾ ಅಧಿಸೂಚನೆಯನ್ನು ಇಂದು ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಕೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಪ್ರಾರಂಭವಾಗಲಿದೆ. ಏಪ್ರಿಲ್ 20ರ ವರೆಗೂ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲು ಅವಕಾಶವಿದೆ.

ನಿತ್ಯ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೂ ನಾಮಪತ್ರವನ್ನು ಸಲ್ಲಿಸಬಹುದು. ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದೆ. ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಾಗೂ 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದೆ. ಹಾಗಾಗಿ ಈ ಎರಡೂ ದಿನ ನಾಮ ಪತ್ರಗಳನ್ನು ಸಲ್ಲಿಸಲು ಯಾವುದೇ ಅವಕಾಶವಿರುವುದಿಲ್ಲ.

ಇನ್ನು ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಯುತ್ತದೆ. ಏ. 24ರ ವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶ ಇರುತ್ತದೆ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರು ಮಾತ್ರವೇ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶ ಮಾಡಲು ಅವಕಾಶವನ್ನು ನೀಡಲಾಗಿದೆ. ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವನ್ನು ಮಾಡಿಕೊಡಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಚುನಾವಣೆ ರಂಗೇರಿದೆ. ಈಗಾಗಲೇ ಅಗತ್ಯ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಅನ್ನು ನಿಯೋಜನೆ ಮಾಡಲಾಗಿದೆ. 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಹಾಗೂ 37 ಪೊಲೀಸ್ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಚೆಕ್‌ ಪೋಸ್ಟ್‌ ಗಳಲ್ಲೂ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅನುಮಾನ ಬಂದ ವಾಹನಗಳನ್ನು ಪರಿಶೀಲಿಸಿ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆದಿದ್ದಾರೆ.

Related News

spot_img

Revenue Alerts

spot_img

News

spot_img