ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ತಿಂಗಳು ಅಷ್ಟೇ ಬಾಕಿ ಇದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬಜೆಟ್ ಮಂಡಿಸುತ್ತಿದ್ದಾರೆ. ತಾವು ಮಂಡಿಸುತ್ತಿರುವ ಎರಡನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿರುವ ಬೊಮ್ಮಾಯಿ, ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿದ 2023-24ನೇ ಆರ್ಥಿಕ ವರ್ಷದ ಕರ್ನಾಟಕ ಬಜೆಟ್‌ನಲ್ಲಿ ಹಲವು ಜನಪ್ರಿಯ ಹಾಗೂ ಹೊಸ ಘೋಷಣೆಗಳನ್ನು ಮಂಡನೆ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ನಲ್ಲಿ ಹಲವು ಜನಪರ ಘೋಷಣೆಗಳನ್ನು ಮಾಡಿದ್ದಾರೆ. ಈ ಕುರಿತ ಸವಿವರ ಇಲ್ಲಿದೆ:
*’ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
*’ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ
*ಮಹಿಳೆಯರ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಗೃಹಿಣಿ ಶಕ್ತಿ’ ಯೋಜನೆ ಜಾರಿ: 46,278 ಕೋಟಿ ರೂ. ಅನುದಾನ
*100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ
*ಜಲನಿಧಿ’ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ
*ಗೋ ಶಾಲೆಗಳ ಸ್ಥಾಪನೆಗೆ ‘ಪುಣ್ಯ ಕೋಟಿ ದತ್ತು ಯೋಜನೆ’
*ವಿದ್ಯಾವರ್ಧಿನಿ’ ಯೋಜನೆಯಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಸೌಕರ್ಯ
‘*ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಅಡಿ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ.
*ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ ತಲಾ 2 ಸಾವಿರ ರೂ.
*’ನಮ್ಮ ನೆಲೆ’ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ
*ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
*’ಆರೋಗ್ಯ ಪುಷ್ಟಿ’ ಯೋಜನೆ ಅಡಿ ಮಹಿಳೆಯರ ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಕ್ರಮ
*ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
*’ಸ್ವಚೇತನ’ ಯೋಜನೆಯಡಿ 5 ಸಾವಿರ ವಿಕಲ ಚೇತನರಿಗೆ ದ್ವಿಚಕ್ರ ವಾಹನ
*’ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ
*’ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
*ರಾಜ್ಯದಲ್ಲಿ ‘ಯಶಸ್ವಿನಿ ಯೋಜನೆ’ ಮರು ಜಾರಿ. 32 ಲಕ್ಷ ರೈತರ ನೋಂದಣಿ
*ರಾಜ್ಯದ 9 ಸ್ಥಳಗಳಲ್ಲಿ ನೂತನವಾಗಿ ಕೈಗಾರಿಕಾ ವಸಹತುಗಳ ಸ್ಥಾಪನೆ
*ಬೆಂಗಳೂರಿನ ಸುತ್ತಮುತ್ತ ವಿಶ್ವ ದರ್ಜೆಯ ‘ಪ್ಲಗ್ & ಪ್ಲೇ’ ಕೈಗಾರಿಕಾ ಪಾರ್ಕ್ ಸ್ಥಾಪನೆ
*500 ಕೋಟಿ ರೂ. ಗಳ ವೆಚ್ಚದಲ್ಲಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು
*ಬೆಂಗಳೂರಿನಲ್ಲಿ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅಭಿವೃದ್ಧಿ
*ರಾಜ್ಯಾದ್ಯಂತ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಒಟ್ಟು 25 ಸಾವಿರ ಕೋಟಿ ರೂ. ಅನುದಾನ
*ಚರ್ಮಗಂಟು ರೋಗದಿಂದ ಬಾಧಿತವಾದ ರಾಸುಗಳ ಮಾಲೀಕರಿಗೆ 55 ಕೋಟಿ ರೂ. ಪರಿಹಾರ
*ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ. ಪ್ರೋತ್ಸಾಹಧನ
*ಬೆಂಗಳೂರಿನ ಅಭಿವೃದ್ಧಿಗೆ 10 ಸಾವಿರ ಕೋಟಿ. ರೂ.