21.1 C
Bengaluru
Sunday, October 6, 2024

ಕರ್ನಾಟಕ ಬಜೆಟ್2024;ಯಾವ ವಲಯಕ್ಕೆ ಎಷ್ಟು ಅನುದಾನ?ಒಟ್ಟು ವೆಚ್ಚ ₹3,71,383 ಕೋಟಿ

#Karnataka Budget 2024# How much grant # sector# Total expenditure #₹3,71,383 crore

karnataka budget 2024: ಸಿಎಂ ಸಿದ್ದರಾಮಯ್ಯನವರು 2024ರ ಬಜೆಟ್ ಮಂಡಿಸಿದ್ದು, ಈ ಬಜೆಟ್‌(Budget)‌ ಮೇಲೆ ರಾಜ್ಯದ ಜನರ ನಿರೀಕ್ಷೆ ಅಪಾರವಿದೆ. ಈಗಾಗಲೇ ಬಜೆಟ್​ನಲ್ಲಿ ವಿವಿಧ ಇಲಾಖೆಗಳಿಗೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ ಎಂಬ ಲೆಕ್ಕಾಚಾರ(calculate) ಹೊರ ಬಿದ್ದಿದೆ.ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ ಎಂಬುವುದು ಉಲ್ಲೇಖನೀಯ. ಒಟ್ಟು 3,71, 383 ಕೋಟಿ ರೂ. ಗಾತ್ರದ ಈ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟೆಷ್ಟು ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.ವರನಟ ಡಾ.ರಾಜ್‌ಕುಮಾ‌ರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ ‘ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ, ಮನಸೊಂದಿದ್ದರೆ ಮಾರ್ಗವು ಉಂಟು ಕೆಚ್ಚೆದೆ ಇರಬೇಕೆಂದೆಂದು’ ಎಂಬ ಹಾಡು ಉಲ್ಲೇಖಿಸಿ, ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮವಾದ ರೀತಿಯಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ವಿಶ್ವಾಸ ನಮ್ಮದಾಗಿದೆ ಎಂದರು.

karnataka budget 2024: ಸಿಎಂ ಸಿದ್ದರಾಮಯ್ಯನವರು 2024ರ ಬಜೆಟ್ ಮಂಡಿಸಿದ್ದು, ವಿವಿಧ ಇಲಾಖೆಗಳಿಗೆ ನೀಡಿದ ಅನುದಾನ ಸಂಪೂರ್ಣ ಮಾಹಿತಿ ಹೀಗಿದೆ

ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.

ಇಂಧನ ಇಲಾಖೆ: 23,159 ಕೋಟಿ ರೂಪಾಯಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ

ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ

ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ

ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ

ಕಂದಾಯ: ₹16,170 ಕೋಟಿ,

ಆರೋಗ್ಯ: ₹15,145 ಕೋಟಿ

ಸಮಾಜ ಕಲ್ಯಾಣ: ₹13,334 ಕೋಟಿ,

ಲೋಕೋಪಯೋಗಿ: ₹10,424 ಕೋಟಿ,

ಆಹಾರ ಇಲಾಖೆ: ₹9,963 ಕೋಟಿ,

ಕೃಷಿ ಇಲಾಖೆ: ₹6,688 ಕೋಟಿ

ಪಶು ಸಂಗೋಪನೆ & ಮೀನುಗಾರಿಕೆ: ₹3,307 ಕೋಟಿ,

ಇತರೆ ಅಭಿವೃದ್ಧಿ ಕಾರ್ಯಗಳಿಗೆ ₹1,24,593 ಕೋಟಿ.

ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಇ-ಆಫೀಸ್ ಪ್ರಾರಂಭ

ಗ್ರಾಮ ಪಂಚಾಯ್ತಿಗಳಲ್ಲಿ ಸ್ವತ್ತುಗಳ ಆಸೆಟ್ ಮಾನಿಟೈಸೇಷನ್ ನೀತಿ ಜಾರಿ

50 ಗ್ರಾ.ಪಂ.ಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ ಸೋಲಾರ್ ದೀಪ ಅಳವಡಿಕೆ

ಸೋಲಾರ್ ದೀಪ ಅಳವಡಿಕೆಗೆ 25 ಕೋಟಿ ರೂ. ಮೀಸಲು

200 ಗ್ರಾ.ಪಂಚಾಯ್ತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್

ಆಯ್ದ 100 ಗ್ರಾ.ಪಂ.ಗಳಲ್ಲಿ ಹಿರಿಯ ನಾಗರಿಕರ ಆರೈಕೆ ಚಿಕಿತ್ಸಾ ಕೇಂದ್ರ

ರಸ್ತೆ ಸಂಪರ್ಕ ಜಾಲ ಅಭಿವೃದ್ಧಿಪಡಿಸಲು ಪ್ರಗತಿಪಥ ಯೋಜನೆ

5,2000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ

ಕಲ್ಯಾಣ ಪಥ ಯೋಜನೆಯಡಿ 1,150 ಕಿ.ಮೀ. ರಸ್ತೆ ಅಭಿವೃದ್ಧಿ

38 ವಿಧಾನಸಭಾ ಕ್ಷೇತ್ರಗಳಲ್ಲಿ 1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ನರೇಗಾ ಯೋಜನೆಯಡಿ 30 ಲಕ್ಷ ಕುಟುಂಬಗಳಿಗೆ ಉದ್ಯೋಗದ ಗುರಿ

ಪ್ರತಿ ತಾಲೂಕಿಗೆ ಎರಡು ಬೂದು ನೀರು ಸಂಸ್ಕರಣಾ ಘಟಕ ನಿರ್ಮಾಣ

ಅರಿವು ಕೇಂದ್ರ ಬಲಪಡಿಸಲು ₹132 ಕೋಟಿಯಲ್ಲಿ ಸ್ವಂತ ಕಟ್ಟಡ ನಿರ್ಮಾಣ

ಕೋಳಿ, ಕುರಿ, ಮೇಕೆ ಸಾಕಾಣೆ & ಮಾರುಕಟ್ಟೆಗೆ ₹100 ಕೋಟಿ

ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಹಾರ ನೀಡಲು ಕೆಫೆ ಸಂಜೀವಿನಿ

ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ ಹೋಟೆಲ್​ಗಳ ಸ್ಥಾಪನೆ

ಕೌಶಲ್ಯ ತರಬೇತಿ ಪಡೆದವರಿಗೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ

ಉದ್ಯಮಗಳ ಬೇಡಿಕೆಗೆ ಪೂರಕವಾದ Skill Connect Summit ಆಯೋಜನೆ

IIM-B ಸಹಯೋಗದೊಂದಿಗೆ 10 ಜಿಲ್ಲೆಗಳಲ್ಲಿ Incubation ಕೇಂದ್ರಗಳು

ವಿದ್ಯಾರ್ಥಿನಿ & ಉದ್ಯೋಗಸ್ಥ ಮಹಿಳೆಯರಿಗೆ 5 ನಗರಗಳಲ್ಲಿ ಹಾಸ್ಟೆಲ್

karnataka budget 2024: ನೀರಾವರಿ ಅಭಿವೃದ್ಧಿಗೆ ಕೊಡುಗೆ ಏನು?

ಕಳಸಾ- ಬಂಡೂರಿ ಯೋಜನೆ ಜಾರಿಗೆ ಸರ್ವ ಕ್ರಮ

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ದ
ರಾಜ್ಯದ ಏತ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ 7,280 ಕೋಟಿ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ – 3 ಯೋಜನೆ ಅಡಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ

karnataka budget 2024: ಆರೋಗ್ಯ ಕ್ಷೇತ್ರಕ್ಕೆ  ಅನುದಾನ

ಪ್ರತೀ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್, ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು 6,493 ಆರೋಗ್ಯ ಕ್ಷೇಮ ಕೇಂದ್ರ & ಪ್ರತೀ ಜಿಲ್ಲೆಯಲ್ಲೂ ಒಂದೊಂದು ಡೇ ಕೇರ್ ಕೆಮೋಥೆರಪಿ ಕೇಂದ್ರ ಸ್ಥಾಪನೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ₹150 ಕೋಟಿ ವೆಚ್ಚದಲ್ಲಿ ತಾಯಿ & ಮಕ್ಕಳ ಆಸ್ಪತ್ರೆ ನಿರ್ಮಾಣ,

ಟೆಲಿ-ಐಸಿಯು ವ್ಯವಸ್ಥೆ ಮುಖೇನ ಜಿಲ್ಲಾ ವೈದ್ಯರ ಸೇವೆ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ.

ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು.

ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂಪಾಯಿಗಳ ಅನುದಾನ ಘೋಷಣೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರ ಖರೀದಿ.

karnataka budget 2024: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್ ನಲ್ಲಿ ಭರ್ಜರಿ ಘೋಷಣೆ

ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಜಲಾಶಯಗಳ ಹಿನ್ನೀರಿನಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಗೆ ಪಣ.
10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ.

ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ.

ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ದಾಖಲೀಕರಣ ಮಾಡಲಾಗಿದೆ.

ಕೆ.ಎಸ್.ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಿಸಲಾಗುವುದು.

ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ.

ರೇಣುಕಾ ಕ್ಷೇತ್ರ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.

KSTDC ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ.

ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್ ಸೆಂಟರ್‌.

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಮಂಡಳಿ ರಚನೆ.

karnataka budget 2024: ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದು ಕೊಡುಗೆ.

ರಾಜ್ಯ ಶಿಕ್ಷಣ ನೀತಿ ಅನುಷ್ಠಾನ,

₹30 ಕೋಟಿ ವೆಚ್ಚದಲ್ಲಿ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು & ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣ,

ಮೂಲಭೂತ ಸೌಕರ್ಯಕ್ಕೆ ಪದವಿ ಕಾಲೇಜುಗಳಿಗೆ ₹250 ಕೋಟಿ, ಪಾಲಿಟೆಕ್ನಿಕ್ ಕಾಲೇಜುಗಳಿಗೆ ₹120 ಕೋಟಿ,

ಉನ್ನತ ಶಿಕ್ಷಣ ಅಭಿವೃದ್ಧಿಪಡಿಸಲು ‘ಬೇರು-ಚಿಗುರು’ ಕಾರ್ಯಕ್ರಮ &ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು ₹54 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ.

ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ

ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ

20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ಅನುದಾನ

ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್

ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ 250 ಕೋಟಿ ಮೀಸಲು

ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು

karnataka budget 2024: ತೋಟಗಾರಿಕೆ ವಲಯದ ಏಳಿಗೆಗೆ ಒತ್ತು

ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಕೃಷಿ ಯಂತ್ರೋಪಕರಣಗಳು ಹಾಗೂ ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ,

ರಫ್ತು ಉತ್ತೇಜನಕ್ಕಾಗಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ

Related News

spot_img

Revenue Alerts

spot_img

News

spot_img