20.5 C
Bengaluru
Tuesday, July 9, 2024

ಕರ್ನಾಟಕ ಚುನಾವಣೆ 2023 : ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ.

ಬೆಂಗಳೂರು, ಫೆ.11: Karnataka Election: ಮುಂಬರುವಂತಹ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರಿಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.

ಡಾ.ರಮಣ ರೆಡ್ಡಿ ಇ.ವಿ , ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಬೆಂಗಳೂರು, ಇವರನ್ನು ಸರ್ಕಾರದ ಮತ್ತು ಅಭಿವೃದ್ಧಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸಾದ್ ISN ಅವರನ್ನು ಏಕಕಾಲೀನ ಚಾರ್ಜ್‌ನಿಂದ ಬಿಡುಗಡೆಗೊಳಿಸಲಾಗಿದೆ.

ಶ್ರೀ, ಕಪಿಲ್ ಮೋಹನ್, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಇವರನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ , ಹಾಗೂ ಇವರಿಗೆ ಪ್ರಭಾರವಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹುದ್ದೆಯನ್ನು ನೀಡಲಾಗಿದೆ.

ಶ್ರೀ. ಕುಮಾರ್ ನಾಯಕ್.ಜಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ,ಇಂಧನ ಇಲಾಖೆ ಬೆಂಗಳೂರು ಇವರನ್ನು ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ ಉಮಾಶಂಕರ್ ಎಸ್.ಆರ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಹ ವಿಭಾಗ ಬೆಂಗಳೂರು ಇವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ)ಇಲಾಖೆ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀಮತಿ. ರಶ್ಮಿ ವಿ ಮಹೇಶ್., ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಬೆಂಗಳೂರು , ಇವರನ್ನು ಪ್ರಧಾನ ಕಾರ್ಯದರ್ಶಿ-, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಡಾ. ಸೆಲ್ವಕುಮಾರ್ ಎಸ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ, ಬೆಂಗಳೂರು ಇವರನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗ ವರ್ಗಾವಣೆ ಮಾಡಲಾಗಿದೆ. ಹಾಗೂ ಹೆಚ್ಚುವರಿಯಾಗಿ ಸರ್ಕಾರದ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ. ಮನೋಜ್ ಜೈನ್.,ಇವರನ್ನು ಸರ್ಕಾರದ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು , ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಡಾ. ಶಿವಶಂಕರ್ ಎನ್., ಕಾರ್ಯನಿರ್ವಾಹಕ ನಿರ್ದೇಶಕರು, ಸುವಮ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಇವರನ್ನು ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್, ಬೆಂಗಳೂರು ಇಲಾಖೆಯ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ. ನಳಿನಿ ಅತುಲ್., ಅವರನ್ನು ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ ಮೊಹಮ್ಮದ್ ರೋಶನ್., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಹಾವೇರಿ ಜಿಲ್ಲೆ, ಇವರನ್ನು ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ, ಹುಬ್ಬಳ್ಳಿ ಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ. ಭೋಯರ್ ಹರ್ಷಲ್ ನಾರಾಯಣರಾವ್., ಇವರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಬೆಳಗಾವಿ ಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ ಭನ್ವರ್ ಸಿಂಗ್ ಮೀನಾ., ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಬೆಂಗಳೂರು ಇವರನ್ನು ಜನರಲ್ ಮ್ಯಾನೇಜರ್, ಪುನರ್ವಸತಿ ಮತ್ತು ಪುನರ್ವಸತಿ ಮತ್ತು ಭೂಮಿ ಸ್ವಾಧೀನ, ಕೃಷ್ಣಾ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ, ಬಾಗಲಕೋಟೆ ಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ ಪ್ರಕಾಶ್ ಜಿ.ಟಿ.ನಿಟ್ಟಾಲಿ., ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಜಿಲ್ಲೆ ಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ. ನೋಂಗ್‌ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ., ಇವರನ್ನು ಹೆಚ್ಚುವರಿ ಮಿಷನ್ ನಿರ್ದೇಶಕ-2,ಸಕಾಲ ಮಿಷನ್, ಬೆಂಗಳೂರು.ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶ್ರೀ ರವಿ ಎಂ ತಿರ್ಲಾಪುರ.,ಕೆಎಎಸ್ , ಮಾನ್ಯ ಕಾನೂನು ಸಚಿವರ ಖಾಸಗಿ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ, ಬೆಂಗಳೂರು ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ ಜಿಲ್ಲೆ,ಬೆಂಗಳೂರು
ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಹಾಗೂ ಶ್ರೀ ಕೆ.ರೇವಣ್ಣಪ್ಪ (ಕೆಎಎಸ್) ಇವರನ್ನು ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Related News

spot_img

Revenue Alerts

spot_img

News

spot_img