Revenue Facts

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ

ಬೆಂಗಳೂರು, ಜೂ. 22 : ಕರ್ನಾಟಕ ರಾಜ್ಯದ ದೇವಸ್ಥಾನಗಳಲ್ಲೂ ಆಂಧ್ರಪ್ರದೇಶದ ಮಾದರಿಯಲ್ಲೇ ಎಲ್ಲಾ ದೇವಸ್ಥಾನಗಳಲ್ಲೂ ಹಿರಿಯ ನಾಗರಿಕರಿಗೆ ನೇರ ದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇನ್ನು ಮುಂದೆ 65ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಕ್ಯೂನಲ್ಲಿ ನಿಂತು ದೇವರ ದರ್ಶನ ಮಾಡಲು ಕಷ್ಟ ಪಡುವಂತಿಲ್ಲ. ಹಿರಿಯ ನಾಗರಿಕರು ಅರಾಮವಾಗಿ ದೇವಸ್ಥಾನದಲ್ಲಿ ದರ್ಶನ ಮಾಡುವ ಅವಕಾಶವನ್ನು ನೀಡಲಾಗಿದೆ.

ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿಯೂ ಹಿರಿಯ ನಾಗರಿಕರಿಗೆ ವಿಶೇಷ ಸವಲತ್ತು ನೀಡಲಾಗುವುದು. ಇದಕ್ಕಾಗಿ ಹಿರಿಯ ನಾಗರೀಕರಿಗಾಗಿ ವಿಶೇಷ ಕ್ಯೂ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್ ಬುಕ್ಕಿಂಗ್‌ನಲ್ಲೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರಿಗೆ ವಸತಿ ನೀಡಲು ಸೂಚಿಸಲಾಗಿದೆ. ಎಲ್ಲ ದೇವಸ್ಥಾನಗಳು ಸ್ವಚ್ಚವಾಗಿರಬೇಕು ಹಾಗೂ ಕುಡಿಯುವ ನೀರು ಶೌಚಾಲಯದ ವ್ಯವಸ್ಥೆ ಇರಲಿ ಎಂದು ಸಚಿವರು ಸೂಚನೆ ನೀಡಿದ್ದಾರೆ.

ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟ ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದರು. ಹಿರಿಯ ನಾಗರೀಕರು ಹಿಂದೂ ದೇವಾಲಯಗಳಲ್ಲಿ ಕ್ಯೂನಲ್ಲಿ ನಿಲ್ಲದೇ ನೇರ ದರ್ಶನ ಸಿಗಲಿ ಎಂದು ಮನವಿ ಮಾಡಿದ್ದರು. ಈ ಪತ್ರವನ್ನು ಓದಿದ ಸಚಿವರು ರಾಜ್ಯದ ಎ‌ ಮತ್ತು ಬಿ ವರ್ಗದ ಸಂಸ್ಥೆಗಳಲ್ಲಿ ಹಿರಿಯ ನಾಗರೀಕರಿಗೆ ಕ್ಯೂ ಇಲ್ಲದೇ ದೇವರ ದರ್ಶನ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ಹಿರಿಯ ನಾಗರೀಕರು ಕಾದು ಕುಳಿತು ಆಯಾಸ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

ಆದರೆ, ಈ ಬಗ್ಗೆ ಧರ್ಮಸ್ಥಳ, ಕುಕ್ಕೆ, ಉಡುಪಿ ಅಷ್ಟಮಠಗಳು ಸೇರಿದಂತೆ ಹಲವು ದೇವಾಲಯಗಳು ಹಿರಿಯ ನಾಗರೀಕರಿಗೆ ನೇರ ದರ್ಶನದ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರದ ಸೂಚನೆಯಂತೆ ದೇವಾಲಯಗಳು ನಡೆದುಕೊಳ್ಳುತ್ತವೆಯೋ ಎಂಬುದನ್ನು ನೋಡಬೇಕಿದೆ.

Exit mobile version