ಬೆಂಗಳೂರು ಜುಲೈ 06: 545 ಪಿ.ಎಸ್.ಐ. ಹುದ್ದೆಗಳಿಗೆ ನಡೆದ ಅಕ್ರಮ ನೇಮಕಾತಿ ಹಗರಣದ ಆರೋಪಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿದ್ದ ಉಳಿದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಬುಧವಾರ ತಿಳಿಸಿದೆ. ಈ ಸುದ್ದಿಯು ದೈಹಿಕ ಪರೀಕ್ಷೆ ಉತ್ತೀರ್ಣರಾಗಿದ್ದ ಸುಮಾರು 50,000 ಅಭ್ಯರ್ಥಿಗಳಲ್ಲಿ ಭಾರಿ ನಿರಾಸೆ ಮೂಡಿಸಿದೆ. ತುಂಬಾ ನಿಯಮದಲ್ಲಿರುವ ವಯಸ್ಸು ಮೀರುವ ಆತಂಕದಲ್ಲಿದ್ದು, ಹೈ ಕೋರ್ಟ್ ತೀರ್ಪು ಏನೆಂದು ನೋಡಬೇಕು.
ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕ ರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಮಾಡಬೇಕೆಂದು ನೂರಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಿ, ನರೇಂದರ್ ಹಾಗೂ ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮಾತನಾಡಿ ” ಪಿಎಸ್ಐ ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲಿ ಆರೋಪಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗಷ್ಟೇ ಪರೀಕ್ಷೆ ನಡೆಸಲಾಗದು. ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ನಡೆದ ಚರ್ಚೆಯ ವರದಿ ನ್ಯಾಯಾಲಯಕ್ಕೆ ಗೌಪ್ಯವಾಗಿ ಸಲ್ಲಿಸಲಾಗುತ್ತಿದೆ. ಎಂದು ತಿಳಿಸಿದರು.
ಈ ಮುಚ್ಚಿದ ಲಕೋಟೆ ಎಂದರೇನು?
ಅಲ್ಲದೆ, ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಗಳನ್ನೊಳಗೊಂಡ ವರದಿಯಮನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಪೀಟಕ್ಕೆ ಸಲ್ಲಿಸಿದರು. ಆ ವರದಿ ಪರಿಶೀಲಿಸಿದ ಪೀಠವು ಅರ್ಜಿಗಳನ್ನು ಮೆರಿಟ್ ಆಧಾರದಲ್ಲಿ ಜುಲೈ 10 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ಎಲ್ಲ ವಾದಿ-ಪ್ರತಿವಾದಿ ವಕೀಲರಿಗೆ ಲಿಖಿತ ವಾದಾಂಶ ಸಲ್ಲಿಸುವಂತೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಜೂ.15ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, 545 ಪಿಎಸ್ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಆರೋಪಪಟ್ಟಿಯಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಮರುಪರೀಕ್ಷೆ ನಡೆಸಬಹುದೇ ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಠೀಸಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ಕೋರ್ಟ್ ಗೆ ತಿಳಿಸುವಂತೆ Additional General (AG) ಗೆ ಸೂಚಿಸಿತ್ತು.
ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರದಿಂದ ಮಾಹಿತಿ ಪಡೆದು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಯಿತು.
ಮರು ಪರೀಕ್ಷೆಗೆ ಆದೇಶ, ರದ್ದು!
545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವುದಾಗಿ 2022 ರ ಏ.29ರಂದು ಅಂದಿನ ಬಿಜೆಪಿ ಸರಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕ ಯಪೂರ್ಣಗೊಳಿಸಿ, ನೇಮಕ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಕೆಎಟಿ ಆ ಅರ್ಜಿಗಳನ್ನು 2022ರ ಜು.19ರಂದು ಮಹಾಗೊಳಿಸಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು 2022ರ ಸೆ.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಪರೀಕ್ಷೆ ನಡೆಸುವ ಸರಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಿತ್ತು.