ಬೆಂಗಳೂರು, ಫೆ. 23 : ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದ್ದು, ಏಕಾಏಕಿ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶಶಿಕುಮಾರ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪೊಲೀಸ್ ಕಮಿಷನರ್, ಮಂಗಳೂರು ನಗರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್, ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಯೋಜಿಸಲಾಗಿದೆ.
ಬೆಂಗಳೂರು ನಗರ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಕುಲದೀಪ್ ಕುಮಾರ್ ಆರ್ ಜೈನ್ ಅವರನ್ನು ಕೂಡ ವರ್ಗಾಯಿಸಲಾಗಿದೆ. ಡಾ. ಕೋನ ವಂಶಿ ಕೃಷ್ಣ ಅವರನ್ನು ಕರ್ನಾಟಕ ರಾಜ್ಯ ರಿಸರ್ವ್ ಪೋಲೀಸ್ ನಿಂದ ಪೋಲಿಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ವೈರ್ಲೆಸ್ ಪೊಲೀಸ್ ಅಧೀಕ್ಷಕರಾಗಿದ್ದ ಐಪಿಎಸ್ ಡೆಕ್ಕಾ ಕಿಶೋರ್ ಬಾಬು ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪ್ರಧಾನ ಕಚೇರಿಯ ಉಪ ಪೊಲೀಸ್ ಆಯುಕ್ತರಾಗಿದ್ದ ಮುಹಮ್ಮದ್ ಸುಜೀತಾ ಎಂ.ಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ನಗರ ಸಂಚಾರ ದಕ್ಷಿಣದ ಉಪ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅವರನ್ನು ವರ್ಗಾವಣೆ ಮಾಡಿ ಉಪ ಪೊಲೀಸ್ ಆಯುಕ್ತರು, ನಗರ ಸಶಸ್ತ್ರ ಮೀಸಲು ಪಡೆಯ ಪ್ರಧಾನ ಕಚೇರಿ, ಬೆಂಗಳೂರು ನಗರ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಯಶೋಧಾ ವಂಟಗೋಡಿ ಅವರನ್ನು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.