20.4 C
Bengaluru
Saturday, November 23, 2024

ಕರ್ನಾಟಕ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.

ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ ಇಲ್ಲ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ ಸಾಧ್ಯತೆಯಿದೆ. ಗೃಹಜ್ಯೋತಿ ಯೋಜನೆಗೆ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಇದಕ್ಕೆ ಕಾರಣ ಇ ಗವರ್ನೆನ್ಸ್ ( ಸೇವಾ ಸಿಂಧು ಗೆ ಸಿದ್ದತೆ) ಹಾಗೂ ಗೊಂದಲಗಳ ನಿವಾರಣೆಗೆ ಸಿದ್ಧತೆ ಮಾಡಿಕೊಳ್ತಿರೋ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡುವ ಸಾಧ್ಯತೆಯಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಗಳ ಮೂಲದಿಂದ ತಿಳಿದುಬಂದಿದೆ.

ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು: ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು. ಆದರೆ, ಈಗ ದಿನಾಂಕವನ್ನು ಮುಂದೂಡಿಕೆ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಯನ್ನು ಮಾಡುತ್ತಿದ್ದು, ಸಭೆಯ ನಂಯತರ ಅಧಿಕೃತ ಮಾಹಿತಿ ಹೊರಬೀಳಲಿದೆ. ಆದರೆ, ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಯಾವ ತೀರ್ಮಾನ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮೊದಲ ಸಚಿವ ಸಂಪುಟದಲ್ಲೇ ಅನುಮೋದನೆ: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ 5 ಗ್ಯಾರಂಟಿಗಳಲ್ಲಿ 200 ಯೂನಿಟ್ ಉಚಿತವಾಗಿ ನೀಡುವ ಗ್ಯಾರಂಟಿಯೂ ಕೂಡ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರಿ ಬಹುಮತ ಗಳಿಸಿದ ಕಾಂಗ್ರೆಸ್ ಸರ್ಕಾರ ರಚಿಸಿದ ಮೊದಲನೇ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಅನುಮೋದನೆ ನೀಡಲಾಗಿತ್ತು. ಇನ್ನು ಗೃಹಜ್ಯೋತಿ ಯೋಜನೆಗೆ ಕೆಲವು ಷರತ್ತುಗಳನ್ನು ವಿಧಿಸಿದ್ದ ಸರ್ಕಾರವು ಜೂನ್ 15ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

2.14 ಕೋಟಿ ಜನರಿಗೆ ಉಚಿತ ವಿದ್ಯುತ್: ನಮ್ಮ ರಾಜ್ಯದಲ್ಲಿ ಸರ್ಕಾರದ ಗೃಹಜ್ಯೋತಿ ಯೋಜನೆ (200 ಯೂನಿಟ್ ಉಚಿತ ವಿದ್ಯುತ್) ಪಡೆಯಲು ಅರ್ಹರಾಗಿರುವ ಫಲಾನುಭವಿಗಳ ಸಂಖ್ಯೆ 2.14 ಕೋಟಿ ಜನರಿದ್ದಾರೆ. ದಿನಕ್ಕೆ 5ರಿಂದ 10 ಲಕ್ಷ ಅರ್ಜಿಗಳ ಸಲ್ಲಿಕೆಗೆ ಅವಕಾಶವಿದ್ದು, ಸರ್ವರ್ ಸಮಸ್ಯೆಯಾಗುವ ಸಾಧ್ಯತೆಯಿದೆ. ಜನರಿಗೆ ಗೊಂದಲ ಆಗದಂತೆ, ದಾಖಲೆಗಳ ಮಾಹಿತಿ ನೀಡುವಂತೆ ಅಧಿಕಾರಿಗಳಿಂದ ಬೆಂಗಳೂರು ಒನ್ (Bengaluru one), ಕರ್ನಾಟಕ ಒನ್ (Karnataka One) ಕೇಂದ್ರಗಳು ಸೇರಿ ವಿವಿಧೆಡೆ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿಸಲಾಗಿತ್ತು. ಆದರೆ, ಈಗ ದಿನಾಂಕವೇ ಮುಂದೂಡಿಕೆ ಆಗುವ ಸೂಚನೆ ಕಂಡುಬರುತ್ತಿದೆ.

ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು 10 ಷರತ್ತುಗಳು:
1. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
2. ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
3. ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು.
4. ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
6. ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
8. ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
9. ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
10. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

Related News

spot_img

Revenue Alerts

spot_img

News

spot_img