18.5 C
Bengaluru
Friday, November 22, 2024

ಕರ್ನಾಟಕ ‘ನಾರಿ ಶಕ್ತಿ’ಗಣರಾಜ್ಯೋತ್ಸವ 2023;ಸ್ತಬ್ಧಚಿತ್ರ

ಬೆಂಗಳೂರು : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ.ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಜನಸಾಮಾನ್ಯರ ಸಾಧನೆಯ ಪ್ರತೀಕವಾಗಿರುವ ಈ ಸ್ತಬ್ಧಚಿತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧಗೊಂಡಿದೆ. ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ನಮ್ಮದು. ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು. ನಾಲ್ಕು ಥೀಮ್‌ಗಳನ್ನು ಸಲ್ಲಿಸಲಾಗಿತ್ತು.ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟ ಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ.

ಇನ್ನೂ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ನಾರಿಶಕ್ತಿ ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿತ್ತು. ರಾಜ್ಯದ ಮಾದರಿ ಮಹಿಳೆಯರಾದ ಸೂಲಗಿತ್ತಿ ನರಸಮ್ಮ, ತುಳಸೀ ಗೌಡ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಪ್ರತಿಕೃತಿಗಳನ್ನು ಹೊಂದಿದ ಆಕರ್ಷಕ ಸ್ತಬ್ಧಚಿತ್ರವನ್ನು ಹೊತ್ತ ವಾಹನ ಸೋಮವಾರ ಕರ್ತವ್ಯಪಥ್​​ ಮಾರ್ಗದಲ್ಲಿ ಸಾಗುತ್ತಾ ಗಣರಾಜ್ಯೋತ್ಸವ ತಾಲೀಮಿನಲ್ಲಿ ಪಾಲ್ಗೊಂಡಿರುವ ಆಕರ್ಷಕ ಚಿತ್ರಗಳು ವಿಶ್ವಪ್ರಸಿದ್ಧ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್‌ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್‌ ಇರುವ ರಾಜ್ಯದ 16 ಕರಕುಶಲ ವಸ್ತುಗಳು(Handicrafts) ಅನಾವರಣಗೊಳ್ಳಲಿವೆ.

ಕಳೆದ ವರ್ಷ ಕರ್ನಾಟಕ ಪ್ರದರ್ಶಿಸಿದ ಜಾಗತಿಕ ಮಾನ್ಯತೆ ಗಳಿಸಿದ ವಸ್ತುಗಳನ್ನು ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಯಿತು. ಶಶಿಧರ ಅಡಪ ಕೈಚಳಕದಲ್ಲಿ ಈ ಸ್ತಬ್ಧಚಿತ್ರ ಅರಳಿದ್ದು, ‘ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ವಿಷಯದ ಕುರಿತು ಈ ಸ್ತಬ್ಧಚಿತ್ರ ರೂಪಿಸಲಾಗಿತ್ತು.

16 ರಾಜ್ಯಗಳ ಟ್ಯಾಬ್ಲೋಗೆ ಅವಕಾಶ: ಕಳೆದ ಬಾರಿ ಟ್ಯಾಬ್ಲೋಗಳ ಆಯ್ಕೆ ಮಾಡಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕೇರಳ, ಪಶ್ಚಿಮ ಬಂಗಾಳಕ್ಕೆ ಈ ಬಾರಿ ಅವಕಾಶ ನೀಡಲಾಗಿದೆ. ಮಿಕ್ಕಂತೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್‌, ಹರಿಯಾಣ, ಜಾರ್ಖಂಡ್‌, ಮಹಾರಾಷ್ಟ್ರ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ, ದಾದರ್‌ ಹವೇಲಿ-ದಮನ್‌, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್‌ ಉಳಿದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ.

2023 ನೆಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು

*ರೇಷ್ಮೆ ಕರ್ನಾಟಕದ ಹೆಮ್ಮೆ

* ಕರ್ನಾಟಕದ ಪುಷ್ಪೋದ್ಯಮ

* ಕರ್ನಾಟಕದ ಮಹಿಳೆಯರ ಶೌರ್ಯ

*ಕರ್ನಾಟಕ ಸಿರಿಧಾನ್ಯದ ನಾಯಕ
* ನಾರಿ ಶಕ್ತಿ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು.

ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ‘ನಾರಿ ಶಕ್ತಿ’ ವಿಷಯವನ್ನು ವಿಷಯ ಆಯ್ಕೆಯ ಪರಿಣತರ ತಂಡವು ಅಂತಿಮಗೊಳಿಸಿತ್ತು. ಇದಕ್ಕೆ ಅನುಗುಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸಲಾಗುತ್ತಿದೆ.

Related News

spot_img

Revenue Alerts

spot_img

News

spot_img