27.7 C
Bengaluru
Wednesday, July 3, 2024

ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಕರ್ನಾಟಕ ಮೂಲದ ಅಬ್ದುಲ್ ನಜೀರ್ ನೇಮಕ,ಗಣ್ಯರಿಂದ ಶುಭಾಶಯ

ನವದೆಹಲಿ: ರಾಷ್ಟ್ರಪತಿ ಭವನವು 12 ರಾಜ್ಯಗಳಗೆ ನೂತನ ರಾಜ್ಯಪಾಲನ್ನು ಹೊಸದಾಗಿ ನೇಮಿಸಿ ಆದೇಶ ಹೊರಡಿಸಿದೆ.ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನೇಮಕ ಮಾಡಿದ್ದಾರೆ.ಆಂಧ್ರಪ್ರದೇಶಕ್ಕೆ ರಾಜ್ಯಪಾಲರಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರು ಕರ್ನಾಟಕದವರಾಗಿದ್ದು ಅವರ ನೇಮಕಾತಿಯು ರಾಜ್ಯದ ಜನರಲ್ಲಿ ಹರ್ಷ ತಂದಿದೆ. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಅಬ್ದುಲ್ ನಜೀರ್ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕಳೆದ ತಿಂಗಳು ಜನವರಿ 4ರಂದುಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿದ್ದ ಅಬ್ದುಲ್ ನಜೀರ್ ಅವರು ಐತಿಹಾಸಿಕ ಅಯೋಧ್ಯೆ ವಿವಾದ ಮತ್ತು ತ್ರಿವಳಿ ತಲಾಖ್ ತೀರ್ಪು ನೀಡಿದ್ದ ಪೀಠದಲ್ಲಿ ಭಾಗಿಯಾಗಿದ್ದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ.

ಎಸ್. ಅಬ್ದುಲ್ ನಜೀರ್ ಪರಿಚಯ;
ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದಲ್ಲಿ ಹುಟ್ಟಿದ ಎಸ್ ಅಬ್ದುಲ್ ನಾಜಿರ್,ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಫೆಬ್ರವರಿ 18, 1983ರಲ್ಲಿ ವಕೀಲಿಕೆ ಆರಂಭಿಸಿದರು.2003ರಲ್ಲಿ ಅದೇ ಹೈಕೋರ್ಟ್​ನಲ್ಲಿ ಹೆಚ್ಚುವರಿ ನ್ಯಾಯಾಧೀಶರು ಮತ್ತು ನಂತರ ಖಾಯಂ ನ್ಯಾಯಾಧೀಶರಾಗಿ ನೇಮಕವಾದರು. 2017ರ ಫೆಬ್ರುವರಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ವೇಳೆಯೇ 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗದೇ ನೇರವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾದ ಮೂರನೇ ಜಡ್ಜ್ ಅವರಾಗಿದ್ದಾರೆ,ದೇಶದ ಇತಿಹಾಸದಲ್ಲಿ ಈ ರೀತಿಯಾಗಿದ್ದು ಮೂರನೇ ಬಾರಿ.ನಿವೃತ್ತ ನ್ಯಾಯಮೂರ್ತಿ ಅಬ್ದುಲ್‌ ನಜೀರ್‌ ಅವರು ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. 2022ರ ಡಿಸೆಂಬರ್‌ನಲ್ಲಿ ಕೇಂದ್ರದ ವಿವಾದಾತ್ಮಕ ನೋಟು ಅಮಾನ್ಯೀಕರಣದ ನಿರ್ಧಾರವನ್ನು ತೆರವುಗೊಳಿಸಿದ ತೀರ್ಪಿನ ಐವರು ನ್ಯಾಯಧೀಶರ ಪೀಠದ ಭಾಗವಾಗಿದ್ದರು.

ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರು. ಇವರ ನೇಮಕಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ. “ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್‌. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿ, ನಿವೃತ್ತರಾಗಿದ್ದರು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಹ ಅಬ್ದುಲ್ ನಜೀರ್ ಅವರನ್ನು ಅಭಿನಂದಿಸಿದ್ದಾರೆ,ಮಂಗಳೂರಿನ ಬೆಳುವಾಯಿ ಗ್ರಾಮದ ಎಸ್.ಅಬ್ದುಲ್ ನಜೀರ್ ಅವರಿಗೆ ಅಭಿನಂದನೆಗಳು ಎಂದು ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.

Related News

spot_img

Revenue Alerts

spot_img

News

spot_img