Revenue Facts

ಕರ್ನಾಟಕ ಚುನಾವಣೆ ಹಿನ್ನೆಲೆ: ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಚುನಾವಣೆ ಹಿನ್ನೆಲೆ: ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Karnataka Election

ಬೆಂಗಳೂರು, ಜ. 12: Karnataka Election:  ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.

ಕಲಬುರ್ಗಿ ಪೊಲೀಸ್ ಅಯುಕ್ತ ಡಾ. ವೈ.ಎಸ್. ರವಿ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಐಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ದಿವ್ಯಾ ಎಸ್. ಗೋಪಿನಾಥ್ ಅವರನ್ನು ಮೈಸೂರಿನಲ್ಲಿರುವ ಪೊಲೀಸ್ ಅಕಾಡೆಮಿಗೆ ವರ್ಗ ಮಾಡಲಾಗಿದೆ.

ಗುಪ್ತಚರ ಇಲಾಖೆಯ ಎಸ್ಪಿಯಾಗಿದ್ದ ಚೇತನ್ ಆರ್. ಅವರನ್ನು ಕಲಬುರಗಿ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾವೇರಿ ಎಸ್ಪಿಯಾಗಿದ್ದ ಹನುಮಂತರಾಯ ಅವರನ್ನು ಎಸ್ಪಿ ಗುಪ್ತಚರ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ಇಲಾಖೆ ಎಸ್ಪಿಯಾಗಿದ್ದ ನಾರಾಯಣ ಎಂ. ಅವರನ್ನು ಕೋಲಾರ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಕೋಲಾರ ಎಸ್ಪಿ ಡಿ. ದೇವರಾಜ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಗುಪ್ತಚರ ಇಲಾಖೆ ಎಸ್ಪಿಯಾಗಿದ್ದ ಡಾ. ಶಿವಕುಮಾರ್ ಅವರನ್ನು ಹಾವೇರಿ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಿ ಅದೇಶ ಹೊರಡಿಸಲಾಗಿದೆ.

Exit mobile version