Revenue Facts

ನಾಳೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸ್ಥಬ್ದವಾಗಲಿದೆ ಕರುನಾಡು

ನಾಳೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ  ಸ್ಥಬ್ದವಾಗಲಿದೆ ಕರುನಾಡು

ಬೆಂಗಳೂರು;ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಗೆ ನಾಳೆ ಕರೆ(ಸೆ.29) ನೀಡಲಾಗಿದೆ. ಇದೇ ವೇಳೆ ಮೇಕೆದಾಟು ಜೊತೆಗೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಅಗತ್ಯವಿರುವ ಮಹದಾಯಿ ಜಾರಿಗೆ ಕೂಡ ಪ್ರಸ್ತಾಪ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ.ಸೆ.29ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದ್ದು, ಅಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ದಿ ಆಕ್ರೋಶ ವ್ಯಕ್ತಪಡಿಸುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಈಗಾಗಲೇ 125 ಕ್ಕೂ ವಿವಿಧ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಯ ಜೊತೆಗೆ ಕೈ ಜೋಡಿಸಿದ್ದು, ಅಟೋ, ಓಲಾ, ಉಬರ್, ಹೊಟೇಲ್ ಅಸೋಸಿಯೇಷನ್, ಶಾಲಾ ಕಾಲೇಜುಗಳ ಒಕ್ಕೂಟ ಬಂದ್‌ಗೆ ಮುಂದಾಗಿದ್ದು, ನಾಳೆ ಇಡೀ ರಾಜ್ಯ ಬಂದ್ ಆಗಲಿದೆ. ಇತ್ತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಲಿದ್ದು, ಪ್ರತಿಭಟನಾ ರ್ಯಾಲಿ ಕೂಡ ನಡೆಯಲಿದೆ.

ಬಿಎಂಟಿಸಿಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲಎಂದು ಬಿಎಂಟಿಸಿ ತಿಳಿಸಿದ್ದು, ಎಲ್ಲಾ ಸಿಬ್ಬಂದಿಗಳು ಕೆಲಸಕ್ಕೆ ಹಾಜಾರಾಗುವಂತೆ ಸೂಚನೆ ನೀಡಿದೆ. ಬಿಎಂಟಿಸಿ ಸೇವೆಯನ್ನು ಸುಗಮಗೊಳಿಸಲು, ಹಾಗೂ ಪ್ರಯಾಣಿಕರ ಸುರಕ್ಷತೆ ಕಾಯ್ದುಕೊಳ್ಳುವ ಸಿಟ್ಟಿನಲ್ಲಿ ಸಂಸ್ಥೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು ತನ್ನ ಸಿಬ್ಬಂದಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.ನಾಳಿನ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ, ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಗುರುವಾರ ಮಧ್ಯರಾತ್ರಿಯಿಂದಲೇ ಸೆಕ್ಷನ್ 144 ಜಾರಿ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ಬೆಂಗಳೂರು ಬಂದ್ ಬಹುತೇಕ ಯಶಸ್ವಿಯಾಗಿದ್ದರೂ, ಜನರ ಓಡಾಟಕ್ಕೆ ಧಕ್ಕೆಯಾಗಿರಲಿಲ್ಲ. ಆದರೆ ಸೆಕ್ಷನ್ 144 ಜಾರಿ ಮಾಡಿದ್ದರಿಂದ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ಸಾಧ್ಯವಾಗಿರಲಿಲ್ಲ.

Exit mobile version