Revenue Facts

ಚುರುಕುಗೊಂಡ ಕೆಂಪೇಗೌಡ ಬಡಾವಣೆಯ ನಿರ್ಮಾಣ ಕಾರ್ಯ

ಚುರುಕುಗೊಂಡ ಕೆಂಪೇಗೌಡ ಬಡಾವಣೆಯ ನಿರ್ಮಾಣ ಕಾರ್ಯ

ಬೆಂಗಳೂರು, ಮೇ. 23 : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣದ ಕಾರ್ಯ ಚುರುಕುಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂದಗತಿಯಲ್ಲಿ ಸಾಗಿದ್ದ ಬಡಾವಣೆ ನಿರ್ಮಾಣ ಕಾರ್ಯ ಈಗ ವೇಗಪಡೆದುಕೊಂಡಿದೆ. ನಿವೇಶನ ಹಂಚಿಕೆದಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರಿಂಗ್ ಸದಸ್ಯ ಶಾಂತರಾಜಣ್ಣ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಕೆಂಪೇಗೌಡ ಬಡಾವಣೆಗೆ ನಾಲ್ಕು ಗ್ರಾಮಗಳು ಸೇರ್ಪಡೆಯಾಗಿವೆ. ಸೀಗೆಹಳ್ಳಿ, ಕನ್ನಲ್ಲಿ, ಕೊಡಿಗೇಹಳ್ಳಿ, ಮಂಗನಹಳ್ಳಿ ಸೇರಿಕೊಂಡಿದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯಲ್ಲಿ 8 ಗ್ರಾಮಗಳು ಸೇರಿವೆ. ಅವುಗಲೆಂದರೆ, ಕೊಮ್ಮಘಟ್ಟ, ಭೀಮನಕುಪ್ಪೆ-ರಾಮಸಾಗರ, ಸೂಲಿಕೆರೆ, ಕೆಂಚನಪುರ, ರಾಮಸಂದ್ರ ಕೊಮ್ಮಘಟ್ಟ, ಕೃಷ್ಣಸಾಗರ, ಚಲ್ಲಘಟ್ಟ ಗ್ರಾಮಗಳಿವೆ.

ಒಟ್ಟಾಗಿ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ 4,043 ಎಕರೆ ಜಮೀನನ್ನು ಒಳಪಡಿಸಲಾಗಿದೆ. ಇದರಲ್ಲಿ ಸದ್ಯ 2,694 ಎಕರೆಯಷ್ಟು ಜಮೀನು ಅನ್ನು ಮಾತ್ರವೇ ಸ್ವಾಧೀನ ಪಡಿಸಿಕೊಂಡಿದ್ದು, ಇದನ್ನು ಇಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರ ಮಾಡಲಾಗಿದೆ. ಇದರಲ್ಲಿ 2,217 ಎಕರೆ ಜಮೀನಿನಲ್ಲಿ ಬಡಾವಣೆ ನಿರ್ಮಾಣ ಕಾಮಗಾರಿಐನ್ನು ಭೌತಿಕವಾಗಿ ಪೂರ್ಣಗೊಳಿಸಲಾಗಿದೆ. ಉಳಿದಿರುವ 167 ಎಕರೆಯಲ್ಲಿ ಬಡಾವಣೆಯ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

2014ರಲ್ಲಿ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಟೆಂಡರ್ ಕರೆದಿತ್ತು. ಸಂಸ್ಥೆಯೊಂದಕ್ಕೆ ಇದರ ಗುತ್ತಿಗೆಯನ್ನು ನೀಡಿತ್ತು. ಆದರೆ, ಜಮೀನನ್ನು ಹಂತ ಹಂತವಾಗಿ ಸ್ವಾಧೀನಪಡಿಸಿಕೊಂಡ ಬಿಡಿಎ ಭೂಮಿಯನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸುವಾಗ ತಡವಾಯ್ತು, ಇದರಿಂದಾಗಿ ಗುತ್ತಿಗೆದಾರರು ಕಾಮಗಾರಿಯನ್ನು ನಿಧಾನಗತಿಯಲ್ಲಿ ಮಾಡಲು ಶುರು ಮಾಡಿದರು. ಇಂದಿಗೂ ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ಒಳಚರಂಡಿ, ಕುಡಿಯುವ ನೀರಿನ ಕೊಳವೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಯಾವುದೇ ಕಾಮಗಾರಿಗಳು ನಡೆಯುತ್ತಿರಲಿಲ್ಲ. ಆದರೆ ಈಗ ಕಾಮಗಾರಿ ಕೆಲಸಗಳು ಚುರುಕುಗೊಂಡಿವೆ.

Exit mobile version