Revenue Facts

ಕರ್ನಾಟಕ ಪರಿಷತ್‌ಗೆ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆ

ಬೆಂಗಳೂರು;ವಿಧಾನ ಪರಿಷತ್‌ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರನ್ನು ನೇಮಿಸಲಾಗಿದೆ. ಬಿಜೆಪಿ(BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(J.P.Nadda) ಸೂಚನೆಯಂತೆ ಆಯ್ಕೆ ನಡೆದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ 6 ತಿಂಗಳ ನಂತರ ವಿಧಾನಸಭೆಗೆ ವಿರೋಧ ಪಕ್ಷದ ನಾಯಕನನ್ನಾಗಿ ಆರ್ ಅಶೋಕ್ ನೇಮಕವಾದರು.ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಎನ್.ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಹಲವು ನಾಯಕರ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.ಇನ್ನೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

Exit mobile version