ಬೆಂಗಳೂರು: ಕೃಷಿ ಭಾಗ್ಯ(Agriculture fortune) ಯೋಜನೆ ಪುನಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ (approval).ವಿಧಾನಸೌಧದಲ್ಲಿ ಗುರುವಾರ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ .ಕೆ. ಪಾಟೀಲ್, 2023-24ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳ ಮಳೆಯಾಶ್ರಿತ ಪ್ರದೇಶದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014 ರನ್ವಯ ಯೋಜನೆ ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದ ಎಂದರು.ಮಳೆ ನೀರಿನ ಸಮರ್ಪಕ ನಿರ್ವಹಣೆ ಮಾಡಿ ಉತ್ಪಾದಕತೆ ಹೆಚ್ಚಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶ. ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಹೊಂಡ ನಿರ್ಮಾಣ, ಪಾಲಿಥೀನ್ ಹೊದಿಕೆ, ಡೀಸೆಲ್ ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ಹೊಂಡದ ಸುತ್ತಲೂ ತಂತಿಬೇಲಿ ನಿರ್ಮಾಣ ಮಡಲಾಗುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. 2013-2018ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಯೋಜನೆ ಜಾರಿ ಮಾಡಲಾಗಿತ್ತು. ಈಗ ಮತ್ತೆ ಜಾರಿ ಮಾಡಲು ಸಿದ್ದು ಸಂಪುಟ ನಿರ್ಧರಿಸಿದೆ.
300 ಹೈಟೆಕ್ ಹಾರ್ವೆಸ್ಟರ್ ಹಬ್ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯವ್ಯಾಪಿ 300 ಹಾರ್ವೆಸ್ಟರ್ ಹಬ್ಗಳನ್ನು/ಫಸಲು ಕಟಾವು ವ್ಯವಸ್ಥೆ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಮುಂದುವರಿಸಲು ಕಡಿಮೆ ವಂತಿಗೆ ನಮೂದಿಸಿರುವ ಬೆಳೆ ವಿಮಾ ಕಂಪನಿಗಳಿಗೆ ನೀಡಿರುವ ಕಾರ್ಯಾದೇಶಗಳಿಗೆ ಸಂಪುಟ ಸಭೆ ಮಂಜೂರಾತಿ ನೀಡಿದೆ. ಶೇ 70ರಷ್ಟು ಸಹಾಯಧನದಲ್ಲಿ ಪ್ರತಿ ಹಾರ್ವೆಸ್ಟರ್ ಹಬ್ ಘಟಕ ಸ್ಥಾಪನೆಗೆ 11 ಕೋಟಿ ಮೀರದಂತೆ ಅನುಷ್ಠಾನಗೊಳಿಸ