ks eshwarappa#retirement#electoral# politics
ಬೆಂಗಳೂರು, ಏ. 11 : ರಾಜ್ಯ ವಿಧಾನಸಭೆ ಚುನಾವಣೆ 2023ಕ್ಕೆ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲಾ ಪಕ್ಷಗಳು ಟಿಕೆಟ್ ಪಟ್ಟಿ ಬಿಡುಗಡೆ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಬಿಜೆಪಿ ಪಕ್ಷ ಟಿಕೆಟ್ ಪಟ್ಟಿ ಅನ್ನು ಬಿಡುಗಡೆ ಮಾಡಲು ಇನ್ನೇನು ಕೆಲವೇ ಸಮವಿದೆ. ಅಷ್ಟರಲ್ಲಾಗಲೇ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದೆ. ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಅನ್ನು ಘೋಷಣೆ ಮಾಡಿದ್ದಾರೆ.
ಚುನಾವಣಾ ರಾಜಕೀಯಕ್ಕೆ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಶ್ವರಪ್ಪ ಅವರು ಪತ್ರ ಬರೆದಿದ್ದಾರೆ. ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಫರ್ಧಿಸುತ್ತಿಲ್ಲ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಹೇಳಿದ್ದಾರೆ. ಹೀಗೆ ಮುಂದುವರಿದು, ಕಳೆದ ನಾಲ್ಕು ದಶಕದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಕೆಎಸ್ ಈಶ್ವರಪ್ಪ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಈಶ್ವರಪ್ಪ ಅವರಿಗೂ ಮುನ್ನವೇ ಹಾಲಾಡಿ ಶ್ರೀನಿವಾಸ ಶೆಟ್ಟಿ, ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ರಾಜ್ಯ ರಾಜಕೀಯದಿಂದ ದೂರ ಸರಿದಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.