21.4 C
Bengaluru
Saturday, July 27, 2024

Kushin Mane:ಆರು ವರ್ಷದ ಎಲ್ಲ ಮಕ್ಕಳಿಗೆ ಹೊಸ ಯೋಜನೆ ಘೋಷಣೆ ಮಾಡಿದ ಸಿದ್ದರಾಮಯ್ಯ,

ಬೆಂಗಳೂರು ಆ25;ಕರ್ನಾಟಕ ಬಜೆಟ್‌ 2023ರಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ‘ಕೂಸಿನ ಮನೆ’ (Kusina mane)ಎಂಬ ಹೆಸರಿನಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರ(childcare center)ಗಳನ್ನು ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಪ್ರಾರಂಭಿಸಲಾಗುವುದು.ಸಿದ್ದರಾಮಯ್ಯ ಸರ್ಕಾರ ರಾಜ್ಯದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಇನ್ನೊಂದು ಹೊಸ ಯೋಜನೆಯನ್ನ ಜಾರಿಗೆ ತಂದಿದ್ದು ಇದು ಪೋಷಕರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು.MNAREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಅಡಿಯಲ್ಲಿ ಎರಡು ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿಗಳು ಮತ್ತು 4,268 ಭೂಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.27,903 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಶಾಂತಿಧಾಮವಾಗಿ ಅಭಿವೃದ್ಧಿಪಡಿಸಲಾಗುವುದು. 5,000 ಶಾಲಾ ಮೈದಾನಗಳನ್ನು ವಿದ್ಯಾಧಾಮಗಳಾಗಿ ಮೇಲ್ದರ್ಜೆಗೇರಿಸಲಾಗುವುದು, 750 ಗ್ರಾಮ ಶಾಂತಿಗಳು ಮತ್ತು 27 ಸಾವಿರ ಕೊಳವೆ ಬಾವಿಗಳ ರೀಚಾರ್ಜ್ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ವಿವರಿಸಿದರು.

ವರುಣಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಸಲಾಗಿದೆ, ಎಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂಬ ಬಗ್ಗೆ ಅಧಿಕಾರಿಗಳು ಭೇಟಿ ನೀಡಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಜ್ಞಾನ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಬೇಕು. ಈ ಕೇಂದ್ರಗಳು ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಾಂವಿಧಾನಿಕ ಶಿಕ್ಷಣ ವ್ಯವಸ್ಥೆ, ವಿಶೇಷ ಸಾಮರ್ಥ್ಯವುಳ್ಳ ಸ್ನೇಹಿ ತಂತ್ರಜ್ಞಾನ ಮತ್ತು ನುರಿತ ವ್ಯಕ್ತಿಗಳಿಂದ ಜ್ಞಾನ ಹಂಚಿಕೆಯಂತಹ ಸೌಲಭ್ಯಗಳನ್ನು ಒದಗಿಸಬೇಕು. ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದರು.

ಪ್ರಸ್ತುತ ಇರುವ ಅಂಗನವಾಡಿಗಳಲ್ಲಿ ಅಥವಾ ಮೂಲಸೌಕರ್ಯ ಇರುವ ಕಡೆಗಳಲ್ಲಿ ಕೂಸಿನ ಮನೆ ಶಿಶುಮಂದಿರಗಳನ್ನು ಆರಂಭಿಸಲಾಗುವುದು. ಈ ಯೋಜನೆ ವಿದ್ಯಾರ್ಥಿಗಳಿಗೆ ಮತ್ತು ಶಾಲೆ ಬಿಟ್ಟ ಮಕ್ಕಳಿಗೆ ಸಹಕಾರಿಯಾಗಲಿದ್ದು, ಮೂರು ವರ್ಷಗಳ ಅವಧಿಯಲ್ಲಿ ಜಾರಿಯಾಗಬೇಕು ಎಂದು ಸಿಎಂ ಅಭಿಪ್ರಾಯಪಟ್ಟರು.ಬಜೆಟ್‌ನಲ್ಲಿ ಹೇಳಿರುವಂತೆ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮತ್ತು ಆರು ವರ್ಷದೊಳಗಿನ ಮಕ್ಕಳ ಸುರಕ್ಷತೆ ಮತ್ತು ಪೋಷಣೆಗಾಗಿ 4,000 ಕೂಸಿನ ಮನೆ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.ಮುಖ್ಯಮಂತ್ರಿಗಳ ಫೆಲೋಶಿಪ್ ಅಡಿಯಲ್ಲಿ 24 ತಿಂಗಳ ಅವಧಿಗೆ ಪ್ರತಿ ತಾಲೂಕಿನಿಂದ ಒಬ್ಬ ನುರಿತ ಯುವ ಪದವೀಧರರನ್ನು ಆಯ್ಕೆ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.ಕಲ್ಯಾಣ ಪ್ರದೇಶದಲ್ಲಿ ತಲಾ 25 ಲಕ್ಷ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ 400 ಸಮುದಾಯ ಶೌಚಾಲಯ ಸಂಕೀರ್ಣಗಳ ನಿರ್ಮಾಣ ಕಾಮಗಾರಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.ಜಲ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

Related News

spot_img

Revenue Alerts

spot_img

News

spot_img