27.6 C
Bengaluru
Friday, October 11, 2024

ನಾಳೆಯಿಂದಲೇ ಗೃಹಲಕ್ಷ್ಮೀ ಯೋಜನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್ ​ಲೈನ್, ಆಫ್ ​ಲೈನ್ ​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.

 

 

 

Related News

spot_img

Revenue Alerts

spot_img

News

spot_img