ಬೆಂಗಳೂರು, ಜು. 15 :ಶಾಲೆಗಳಲ್ಲಿ ಕಳಪೆ ಮೊಟ್ಟೆ ನೀಡುತ್ತಿರುವ ಕುರಿತು ರಾಜ್ಯಾದ್ಯಂತ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ವಿತರಿಸುತ್ತಿರುವ ಪ್ರಕರಣಗಳು ವರದಿಯಾದ ಜಿಲ್ಲೆಗಳಷ್ಟೇ ಅಲ್ಲದೇ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ .
ಕಳಪೆ ಮೊಟ್ಟೆಗಳು ಸ್ಥಳಕ್ಕೆ ಸಂಬಂಧಿಸಿದ ಪೂರೈಕೆದಾರರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ.ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಮಹತ್ವಾಕಾಂಕ್ಷಿ ಮಾತೃ ವಂದನಾ ಮತ್ತು ಮಾತೃಪೂರ್ಣ ಯೋಜನೆಗಳನ್ನು ನಿಲ್ಲಿಸಲು ಅವಕಾಶವಿಲ್ಲ. ಮಾತೃವಂದನಾ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಅದಕ್ಕೆ ನಿರಂತರವಾದ ಅನುದಾನ ಬರುತ್ತದೆ. ಮಾತೃಪೂರ್ಣ ರಾಜ್ಯ ಸರ್ಕಾರದ ಅನುದಾನದಲ್ಲಿ ನಡೆಯುತ್ತದೆ. ಇವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಯುತ್ತಿವೆ ಎಂದರು.